
ಹುಬ್ಬಳ್ಳಿ:ಆ-12: ಹುಬ್ಬಳ್ಳಿ ಮ ತಿಮ್ಮಸಾಗರ ಗ್ರಾಮ, ಹೊಸೂರು ಉಣಕಲ್ ರಸ್ತೆಯಲ್ಲಿ ನಿರ್ಮಿಸಲಾಗಿರುವ ಹುಬ್ಬಳ್ಳಿ ನೂತನ ನ್ಯಾಯಲಯಗಳ ಸಂಕೀರ್ಣದ ಉದ್ಘಾಟನೆಯನ್ನು ಸರ್ವೋಚ್ಚ ನ್ಯಾಯಾಲಯದ ಗೌರವಾನ್ವಿತ ಮುಖ್ಯನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಹಚ್ ಡಿ ಕುಮಾರಸ್ವಾಮಿ, ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧಿಶರುಗಳಾದ ಮೋಹನ್ ಎಂ ಶಾಂತನಗೌಡರ್, ಎಸ್ ಅಬ್ದುಲ್ ನಜೀರ್, ಹಾಗೂ ಗೌರವಾನ್ವಿತ ಕರ್ನಾಟಕದ ಉಚ್ಚನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ದಿನೇಶ್ ಮಾಹೇಶ್ವರಿ, ವಿಧಾನ ಪರಿಷತ್ ಸಭಾಧ್ಯಕ್ಷ ಬಸವರಾಜ ಹೊರಟ್ಟಿ, ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶಟ್ಟರ್, ಲೋಕೋಪಯೋಗಿ ಸಚಿವರಾದ ಹೆಚ್ ಡಿ ರೇವಣ್ಣ, ಕರ್ನಾಟಕ ಉಚ್ಚ ನ್ಯಾಯಾಲಯದ ಗೌರವಾನ್ವಿತ ನ್ಯಾಧೀಶರುಗಳಾದ ರವಿ ಮಳಿಮಠ, ಕರ್ನಾಟಕ ಉಚ್ಚ ನ್ಯಾಯಾಲಯದ ಗೌರವಾನ್ವಿತ ನ್ಯಾಯವಕೀಧೀಶರು ಹಾಗೂ ಆಡಳಿತಾತ್ಮಕ ನ್ಯಾಯಮೂರ್ತಿಗಳದ ಬೂದಿಹಾಳ, ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಟಿ ಎಂ ವಿಜಯ ಭಾಸ್ಕರ್, ಪ್ರಾಧನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಈಶಪ್ಪ ಭೂತೆ, ಹುಬ್ಬಳ್ಳಿ ವಕೀಲರ ಸಂಘದ ಅಧ್ಯಕ್ಷರಾದ ಎ ಬಿ ಬಳಿಗಾರ್ ಮತ್ತಿತರರು ಉಪಸ್ಥಿತಿತರಿದ್ದರು.