ಅನಧಿಕೃತವಾಗಿ ಮತ್ತೆ ಫ್ಲೆಕ್ಸ್ ಅಳವಡಿಕೆ: 16 ಆರೋಪಿಗಳ ಬಂಧನ

 

ಬೆಂಗಳೂರು, ಆ.12- ಪ್ಲೆಕ್ಸ್ ಮತ್ತು ಬ್ಯಾನರ್ ತೆರವುಗೊಳಿಸುವಂತೆ ಹೈಕೋರ್ಟ್ ಕಟ್ಟುನಿಟ್ಟಿನ ಆದೇಶ ನೀಡಿದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ನಗರ ಪೆÇಲೀಸರು, ನಿಯಮ ಉಲ್ಲಂಘಿಸಿದ ಆರೋಪದಲ್ಲಿ ಒಂದೇ ರಾತ್ರಿ ಎರಡು ಠಾಣಾ ವ್ಯಾಪ್ತಿಯಲ್ಲಿ 16 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಅನಧಿಕೃತವಾಗಿ ವಿವಿಧ ಕಡೆಗಳಲ್ಲಿ ಫ್ಲೆಕ್ಸ್ ಅಳವಡಿಸಿದ ಆರೋಪದಲ್ಲಿ ಇವರನ್ನು ಬಂಧಿಸಲಾಗಿದೆ. ಬೆಂಗಳೂರಿನ ಕಾಡುಗೋಡಿ ಠಾಣಾ ಪೆÇಲೀಸರು 5 ಮಂದಿ ಆರೋಪಿಗಳನ್ನು ಬಂಧಿಸಿದರೆ, ಮಾರತ್‍ಹಳ್ಳಿ ಪೆÇಲೀಸರು 11 ಜನ ಆರೋಪಿಗಳ ಬಂಧಿಸಿದ್ದಾರೆ.
ಪ್ರತಿಷ್ಠಿತ ಚಿನ್ನಾಭರಣ ಸಂಸ್ಥೆ ಸೇರಿ ಇತರೆ ಪ್ರತಿಷ್ಠಿತ ಕಂಪೆನಿಗಳು ಹಾಗೂ ಶಾಲಾ-ಕಾಲೇಜುಗಳ ವಿರುದ್ಧವೂ ಎಫ್‍ಐಆರ್ ದಾಖಲು ಮಾಡಿಕೊಳ್ಳಲಾಗಿದೆ. ದೂರು ದಾಖಲಾದ ಕಂಪೆನಿಗಳ ಅಧಿಕಾರಿಗಳನ್ನು ಕೂಡ ಪೆÇಲೀಸರು ಬಂಧಿಸಿದ್ದಾರೆ.
ಕಾಡುಗೋಡಿ ಪೆÇಲೀಸರಿಂದ ಬಂಧಿತರಾಗಿರುವ ಐವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ