ಏರ್ ಶೋ ಪ್ರದರ್ಶನ ಸ್ಥಳಾಂತರಕ್ಕೆ ಡಾ.ಜಿ.ಪರಮೇಶ್ವರ್ ಖಂಧನೆ

 

ಬೆಂಗಳೂರು, ಆ.12-ರಾಜ್ಯದಿಂದ ಏರ್ ಶೋ ಪ್ರದರ್ಶನ ಸ್ಥಳಾಂತರಕ್ಕೆ ವಿರೋಧ ವ್ಯಕ್ತಪಡಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಮಾಜಿ ಸಂಸದ ಡಾ.ಬಿ.ಎಲ್.ಶಂಕರ್, ಪೆÇ್ರ.ವಲೇರಿಯನ್ ರೊಡ್ರಿಗಸ್ ಅವರ ಭಾರತದ ಸಂಸತ್ತು ಒಂದು ಕಾರ್ಯನಿರತ ಪ್ರಜಾಪ್ರಭುತ್ವ ಕೃತಿಯ ಕನ್ನಡ ಅನುವಾದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯದಿಂದ ಏರ್ ಶೋ ಸ್ಥಳಾಂತರ ಮಾಡುವುದನ್ನು ಖಂಡಿಸುತ್ತೇವೆ. ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಮ್ಮ ರಾಜ್ಯವನ್ನು ಪ್ರತಿನಿಧಿಸಿದ್ದು, ಕರ್ನಾಟಕದಲ್ಲೇ ಏರ್ ಶೋ ಉಳಿಸುತ್ತಾರೆ ಎಂಬ ವಿಶ್ವಾಸವಿತ್ತು. ಆದರೆ, ಏರ್‍ಶೋ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ. ಮುಂದಿನ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಏರ್ ಶೋವನ್ನು ಉತ್ತರ ಪ್ರದೇಶಕ್ಕೆ ಸ್ಥಳಾಂತರ ಮಾಡುವ ಉದ್ದೇಶವಿದೆ ಎಂದು ಆರೋಪಿಸಿದರು.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರ ಟೀಕೆಗೆ ತಿರುಗೇಟು ನೀಡಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೋಲಿಗೆ ತಾವು ಕಾರಣ ಎಂದು ಹೇಳಿಕೆ ನೀಡಿರುವ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರಿಗೆ ಏನೋ ಆಗಿದೆ. ಅವರ ಮನಸ್ಥಿತಿ ಸರಿಯಿಲ್ಲವೇನೋ ಎಂದರು.
ಇದಕ್ಕೂ ಮುನ್ನ ಕಾರ್ಯಕ್ರಮದಲ್ಲಿ ಮಾತನಾಡಿದ ಪರಮೇಶ್ವರ್, ಪ್ರಜಾಪ್ರಭುತ್ವದ ವ್ಯವಸ್ಥೆಯ ಫಲ ಎಲ್ಲರಿಗೂ ಸಿಗಲು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕಾಗಿದೆ ಎಂದರು.
ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಪ್ರಜಾಪ್ರಭುತ್ವದ ವ್ಯವಸ್ಥೆಯ ಫಲ ಹೆಚ್ಚಿನ ಜನರಿಗೆ ಸಿಕ್ಕಿಲ್ಲ ಎಂಬ ಅಭಿಪ್ರಾಯವಿದೆ. ಆದರೂ, ಸಾಕಷ್ಟು ಅಭಿವೃದ್ಧಿಯಾಗಿರುವದನ್ನು ಗಮನಿಸಬಹುದು ಎಂದು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ