ಹಸಿರು ಕರ್ನಾಟಕ ಯೋಜನೆಗೆ ಸಿಎಂ ಚಾಲನೆ ಮೂಲಕ 72ನೇ ಸ್ವಾತಂತ್ರ್ಯೋತ್ಸ ಆಚರಣೆ

 

ಬೆಂಗಳೂರು, ಆ.13- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಜೆಟ್‍ನಲ್ಲಿ ಘೋಷಿಸಿರುವ ಮಹತ್ವಾಕಾಂಕ್ಷೆಯ ಹಸಿರು ಕರ್ನಾಟಕ ಯೋಜನೆ ಪ್ರಾರಂಭಿಸುವ ಮೂಲಕ 72ನೇ ಸ್ವಾತಂತ್ರ್ಯೋತ್ಸವಕ್ಕೆ ಚಾಲನೆ ನೀಡಲಿದ್ದಾರೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ವಿಜಯ ಶಂಕರ ತಿಳಿಸಿದ್ದಾರೆ.
ನಗರ ಪೆÇಲೀಸ್ ಆಯುಕ್ತ ಸುನೀಲ್ ಕುಮಾರ್ ಅವರೊಂದಿಗೆ ಪರೇಡ್ ಮೈದಾನದಲ್ಲಿ ನಡೆಯುತ್ತಿರುವ ಪೂರ್ವತಯಾರಿ ಮತ್ತು ಸಿದ್ಧತೆಗಳನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ ತಿಂಗಳಲ್ಲಿ ಕುಮಾರಸ್ವಾಮಿಯವರು ಮಂಡಿಸಿದ 2018-19ನೇ ಸಾಲಿನ ಬಜೆಟ್‍ನಲ್ಲಿ ಹಸಿರು ಕರ್ನಾಟಕ ಎಂಬ ಯೋಜನೆಯನ್ನು ಘೋಷಿಸಿದ್ದರು. ನಾಳೆ ಅವರು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಸಿ ನೆಡುವ ಮತ್ತು ವಿತರಿಸುವ ಮೂಲಕ ಈ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದು ಅವರು ತಿಳಿಸಿದರು.

ಈ ಬಾರಿ ಲೈಂಗಿಕ ಅಲ್ಪಸಂಖ್ಯಾತರು, ಎಚ್‍ಐವಿ ಪೀಡಿತರು, ಅನಾಥ ಮಕ್ಕಳು, ವಯೋವೃದ್ಧರು, ಬುದ್ಧಿಮಾಂದ್ಯರು, ವಿಕಲಚೇತನರು ಹಾಗೂ ವಿವಿಧ ಜಿಲ್ಲೆಗಳಿಂದ ಕೃಷಿಯಲ್ಲಿ ಸಾಧನೆಗೈದ ರೈತಾಪಿ ವರ್ಗದವರನ್ನು ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ವೀಕ್ಷಿಸಲು ಆಹ್ವಾನಿಸಿರುವುದು ವಿಶೇಷತೆಯಾಗಿದೆ ಎಂದು ಅವರು ತಿಳಿಸಿದರು.

ಸ್ವಾತಂತ್ರ್ಯೋತ್ಸವ ಆಚರಣೆಗೆ ನಗರದಲ್ಲಿ ಸಕಲ ಸಿದ್ಧತೆ ಕೈಗೊಳ್ಳಲಾಗಿದ್ದು, ಪ್ರಧಾನ ಕಾರ್ಯಕ್ರಮ ನಡೆಯುವ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಎಲ್ಲಾ ರೀತಿಯ ಅಗತ್ಯ ತಯಾರಿಗಳನ್ನು ಕೈಗೊಳ್ಳಲಾಗಿದೆ ಎಂದು
ಬುಧವಾರ ಬೆಳಗ್ಗೆ 9 ಗಂಟೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಧ್ವಜಾರೋಹಣ ನೆರವೇರಿಸಲಿದ್ದು, ಈ ವೇಳೆ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‍ನಿಂದ ಪುಷ್ಪವೃಷ್ಟಿ ನಡೆಯಲಿದೆ ಎಂದು ತಿಳಿಸಿದರು.

ಧ್ವಜಾರೋಹಣದ ಬಳಿಕ ಮುಖ್ಯಮಂತ್ರಿಯವರು ಪರೇಡ್ ವೀಕ್ಷಿಸಿ, ಗೌರವ ರಕ್ಷೆ ಸ್ವೀಕರಿಸಿ ನಾಡಿನ ಜನತೆಗೆ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಲಿದ್ದಾರೆ. ಪಥಸಂಚಲನದಲ್ಲಿ ಗೋವಾ ಪೆÇಲೀಸ್, ಸ್ಕೌಟ್ಸ್- ಗೈಡ್ಸ್, ಎನ್‍ಸಿಸಿ, ಸೇವಾದಳ ಹಾಗೂ ವಿವಿಧ ಶಾಲೆಗಳ ಮಕ್ಕಳನ್ನು ಒಳಗೊಂಡ ಕವಾಯತು ಮತ್ತು ಬ್ಯಾಂಡ್‍ನ ಒಟ್ಟು 34 ತುಕಡಿಗಳಲ್ಲಿ ಸುಮಾರು 1130ಮಂದಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

ಸ್ವಾತಂತ್ರ್ಯೋತ್ಸವ ಸಮಾರಂಭಕ್ಕೆ ಹಿಂದೆಂದಿಗಿಂತಲೂ ಹೆಚ್ಚಿನ ಭದ್ರತೆ ಒದಗಿಸಲಾಗಿದ್ದು, ಮೈದಾನದಲ್ಲಿ ಒಟ್ಟು 50 ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ. 9 ಡಿಸಿಪಿ, 16 ಎಸಿಪಿ, 46 ಇನ್ಸ್‍ಪೆಕ್ಟರ್, 102 ಪಿಎಸ್‍ಐ ಮತ್ತು ಸಂಚಾರ ನಿರ್ವಹಣೆಗಾಗಿ ಇಬ್ಬರು ಡಿಸಿಪಿ, 7ಎಸಿಪಿ, ಸೇರಿ ಒಟ್ಟು 1500ಕ್ಕೂ ಅಧಿಕ ಪೆÇಲೀಸರನ್ನು ನಿಯೋಜಿಸಲಾಗುವುದು ಎಂದು ನಗರ ಪೆÇಲೀಸ್ ಆಯುಕ್ತ ಸುನೀಲ್ ಕುಮಾರ್ ಹೇಳಿದರು.

4 ಬ್ಯಾಗೇಜ್ ಸ್ಕ್ಯಾನರ್ ಮತ್ತು ವ್ಯವಸ್ಥಿತ ಸಂಚಾರ ನಿಯಂತ್ರಣ ವ್ಯವಸ್ಥೆಗಳನ್ನು ಮಾಡಲಾಗಿದೆ. ಯಾವುದೇ ಆಕಸ್ಮಿಕ ವಿಪತ್ತು ಸಂಭವಿಸಿದಲ್ಲಿ ತಕ್ಷಣ ನೆರವಿಗೆ ಧಾವಿಸಲು ಅಗತ್ಯವಿರುವಷ್ಟು ಆಂಬುಲೆನ್ಸ್‍ಗಳನ್ನು ವೈದ್ಯಕೀಯ ಹಾಗೂ ವೈದ್ಯಕೀಯೇತರ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ನಗರದ ಹಲವು ಆಸ್ಪತ್ರೆಗಳನ್ನು ಗುರುತಿಸಿ ಸಾಕಷ್ಟು ಸಂಖ್ಯೆಯಲ್ಲಿ ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ ಎಂದು ಅವರು ತಿಳಿಸಿದರು.
ಆಕಸ್ಮಿಕ ಬೆಂಕಿ ಅವಘಡಗಳನ್ನು ನಿಯಂತ್ರಿಸಲು ಅಗ್ನಿಶಾಮಕ ವಾಹನಗಳೊಂದಿಗೆ ಸಾಕಷ್ಟು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅತಿ ಗಣ್ಯ ವ್ಯಕ್ತಿಗಳು, ಗಣ್ಯವ್ಯಕ್ತಿಗಳು, ಅಧಿಕಾರಿಗಳು ಮತ್ತು ಸಾರ್ವಜನಿಕರು ಸೇರಿದಂತೆ ಒಟ್ಟು 10 ಸಾವಿರ ಮಂದಿಗೆ ಆಸನ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ನಿರ್ದಿಷ್ಟ ಬೆದರಿಕೆ ಇಲ್ಲ
ಈ ಬಾರಿಯ ಸ್ವಾತಂತ್ರ್ಯೋತ್ಸವಕ್ಕೆ ನಿರ್ದಿಷ್ಟ ಬೆದರಿಕೆ ಇಲ್ಲ. ಆದ್ದರಿಂದ ಯಾರೂ ಆತಂಕ ಪಡುವ ಅಗತ್ಯ ಇಲ್ಲ. ಆದರೂ ಮುಂಜಾಗೃತಾ ಕ್ರಮವಾಗಿ ಅಗತ್ಯ ಭದ್ರತೆ ಒದಗಿಸಲಾಗಿದೆ ಎಂದು ನಗರ ಪೆÇಲೀಸ್ ಆಯುಕ್ತ ಸುನೀಲ್ ಕುಮಾರ್ ತಿಳಿಸಿದರು.
ಆಕರ್ಷಕ ಸಾಂಸ್ಕøತಿಕ ಕಾರ್ಯಕ್ರಮಕ್ಕೆ ಸಿದ್ಧತೆ
2000 ಶಾಲಾ ಮಕ್ಕಳಿಂದ ಆಕರ್ಷಕ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ. ಕಿಕ್ಕೇರಿ ಕೃಷ್ಣಮೂರ್ತಿ ಮತ್ತು ತಂಡದವರು ಮೊದಲು ನಾಡಗೀತೆ ಮತ್ತು ರೈತ ಗೀತೆ ಪ್ರಸ್ತುತಪಡಿಸಲಿದ್ದಾರೆ. ಬಳಿಕ ಬೆಂಗಳೂರು ಉತ್ತರ ಜಿಲ್ಲೆಯ ನೆಲಗದರನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 650 ವಿದ್ಯಾರ್ಥಿಗಳು ಕ್ರಾಂತಿವೀರ ಮುಂಡರಗಿ ಭೀಮರಾಯ ಸಾಂಸ್ಕøತಿಕ ಕಾರ್ಯಕ್ರಮ ಪ್ರಸ್ತುತಪಡಿಸಲಿದ್ದಾರೆ.ಬಳಿಕ ಮಾನ್ವಿ ಗುಲಾಟ ಅವರಿಂದ ಯೋಗ ಪ್ರದರ್ಶನ ನಡೆಯಲಿದೆ. ದೇಶಭಕ್ತ ಮೈಲಾರ ಮಹಾದೇವ ಕಾರ್ಯಕ್ರಮವನ್ನು ಬೈರವೇಶ್ವರ ನಗರದ ಬಿಬಿಎಂಪಿ ಪ್ರೌಢಶಾಲೆಯ 650 ವಿದ್ಯಾರ್ಥಿಗಳು ನಡೆಸಿಕೊಡಲಿದ್ದಾರೆ. ಬನ್ನೇರುಘಟ್ಟದ ಲಿಲ್ಲಿ ರೋಸ್ ಪ್ರೌಢಶಾಲೆಯ 750 ಮಕ್ಕಳು ಜೈಹಿಂದ್ ಜೈ ಭಾರತ್ ಎಂಬ ಕಾರ್ಯಕ್ರಮ ಪ್ರಸ್ತುತಪಡಿಸಲಿದ್ದಾರೆ. ಬಳಿಕ ಮಿಲಿಟರಿ ಎನ್‍ಎಸ್‍ಸಿ ಸೆಂಟರ್ ಸೌತ್‍ನ 39 ಸದಸ್ಯರು ಎಎಸ್‍ಸಿ ಟಾರ್ನೋಟೋಸ್ ಎಂಬ ಸಾಹಸಮಯ ಕಾರ್ಯಕ್ರಮ ಪ್ರದರ್ಶಿಸಲಿದ್ದಾರೆ ಎಂದು ಅವರು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ