ಪ್ರಜ್ವಲ್ ರೇವಣ್ಣ ಹಾಸನದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧೆ ನಿಶ್ಚಿತ

ಹಾಸನ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಸ್ಪರ್ಧಿಸುವುದು ನಿಶ್ಚಿತವಾಗಿದೆ.

ಹರದನಹಳ್ಳಿಯಲ್ಲಿ ಈಶ್ವರ ದೇವಾಲಯಕ್ಕೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಎಚ್‍ಡಿಡಿ ಮಾತನಾಡಿದ್ದಾರೆ. ಹಾಸನದಿಂದ ಮಾಜಿ ಪ್ರಧಾನಿ ಸ್ಪರ್ಧೆ ಮಾಡ್ತಾರೆ ಅಂತ ಹೇಳಲಾಗುತ್ತಿತ್ತು. ಆದ್ರೆ ಇದೀಗ ಮಾಜಿ ಪ್ರಧಾನಿಯವರು ಪ್ರಜ್ವಲ್ ರೇವಣ್ಣ ಅವರು ಕಣಕ್ಕಿಳಿಯುವ ಕುರಿತು ಸುಳಿವು ನೀಡಿದ್ದಾರೆ.

ಕುಮಾರಸ್ವಾಮಿ ಈಗಾಗಲೇ ರಾಷ್ಟ್ರ ರಾಜಕಾರಣಕ್ಕೆ ಏಕೆ ಹೋಗ್ತಾರೆ..? ಇನ್ನೂ 10 ವರ್ಷ ಇಲ್ಲೇ ಇರ್ತಾರೆ ಮುಂದೆ ನೋಡೋಣ ಅಂತಾ ದೇವೇಗೌಡ್ರು ಹೇಳಿಕೆ ನೀಡಿದ್ದು, ಪ್ರಜ್ವಲ್ ರೇವಣ್ಣ ಲೋಕಸಭೆ ಚುನಾವಣಾ ಕಣಕ್ಕೆ ಇಳಿಯಲಿದ್ದಾರೆ. ಆದ್ರೆ ಪ್ರಜ್ವಲ್ ರೇವಣ್ಣ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಅನ್ನೋದನ್ನ ಮುಂದೆ ನಿರ್ಧಾರ ಮಾಡೋದಾಗಿ ತಿಳಿಸಿದ ಅವರು, ಸಮ್ಮಿಶ್ರ ಸರ್ಕಾರ ಚೆನ್ನಾಗಿಯೇ ನಡೀತಾ ಇದೆ. ಯಾವುದೇ ಸಮಸ್ಯೆಗಳಿಲ್ಲ. ಅಲ್ಲದೇ ಯಾವುದೇ ಗೊಂದಲಗಳಿಲ್ಲ ಅಂತ ಹೇಳಿದ್ದಾರೆ.

ಇಂದು ಶ್ರಾವಣ ಮಾಸದ ಹಿನ್ನೆಲೆಯಲ್ಲಿ ಎಚ್‍ಡಿಡಿ ಕುಟುಂಬದ ಮನೆ ದೇವರು ಹೊಳೆನರಸೀಪುರದ ಹರದನಹಳ್ಳಿ ಈಶ್ವರ ದೇವಾಲಯ, ಅವರ ತಂದೆಯ ಮೆಚ್ಚಿನ ದೈವ ಮಾವಿನ ಕೆರೆ ಬೆಟ್ಟದ ರಂಗನಾಥಸ್ವಾಮಿ ಸೇರಿದಂತೆ ಅವರ ಕುಲದೈವದ ಪೂಜೆಯಲ್ಲಿ ಭಾಗಿಯಾಗಿದ್ದಾರೆ. ನಂತರ ಧರ್ಮಸ್ಥಳದ ಮಂಜುನಾಥ ಸ್ವಾಮಿ ಪೂಜೆಗೆ ಸಿಎಂ ಕುಮಾರಸ್ವಾಮಿ ತೆರಳಲಿದ್ದಾರೆ. ಸಂಜೆ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಾಲಯಕ್ಕೆ ಕೂಡ ಭೇಟಿ ನೀಡಲಿದ್ದಾರೆ. ಕುಮಾರಸ್ವಾಮಿ ಸ್ವಾಮಿ ಜೊತೆ ತಂದೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಹಾಗೂ ಸಹೋದರ ಸಚಿವ ಹೆಚ್ ಡಿ ರೇವಣ್ಣ ಪಾಲ್ಗೊಳ್ಳಲಿದ್ದಾರೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ