ನವಜೋತ್ ಸಿಂಗ್ ಸಿಧು ಇಮ್ರಾನ್ ಖಾನ್ ಪ್ರಮಾಣವಚನ ಸಮಾರಂಭಕ್ಕೆ ತೆರಳಿದರೆ ದೇಶದ್ರೋಹ ಎಂದ ಸುಬ್ರಹ್ಮಣ್ಯನ್ ಸ್ವಾಮಿ

ನವದೆಹಲಿ:ಆ-14: ಪಾಕ್ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸುತ್ತಿರುವ ಇಮ್ರಾನ್ ಖಾನ್ ಪ್ರಮಾಣವಚನ ಸಮಾರಂಭಕ್ಕೆ ಮಾಜಿ ಕ್ರಿಕೆಟರ್ ಹಾಗೂ ರಾಜಕಾರಣಿ ನವಜೋತ್ ಸಿಂಗ್ ಸಿಧು ತೆರಳಿದರೆ ಅವರನ್ನು ದೇಶದ್ರೋಹಿ ಎಂದು ಪರಿಗಣಿಸಲಾಗುವುದು ಎಂದು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ,

ಆಗಸ್ಟ್ 18 ರಂದು ನಡೆಯುವ ಇಮ್ರಾನ್ ಖಾನ್ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಸಿದು, ಕಪಿಲ್ ದೇವ್, ಸೇರಿದಂತೆ ಹಲವು ಬಾಲಿವುಡ್ ತಾರೆಯರಿಗೆ ಆಹ್ವಾನ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಪಾಕಿಸ್ತಾನಕ್ಕೆ ತೆರಳಲು ಅನುಮತಿ ಕೋರಿ ಅರ್ಜಿ ಸಲ್ಲಿಸಿರುವುದಾಗಿ ಸಿದು ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸುಬ್ರಮಣಿಯನ್ ಸ್ವಾಮಿ, ಸಿದು ಅವರ ಮಾನಸಿಕ ಸ್ಥಿತಿ ಸರಿಯಲ್ಲ ಎಂದು ನಾನು ಭಾವಿಸುತ್ತೇನೆ, ಒಂದು ವೇಳೆ ಅವರ ಮಾನಸಿಕ ಸ್ಥಿತಿ ಸರಿಯಿದ್ದರೇ ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂದು ತಿಳಿಸಿದ್ದಾರೆ.

ಒಂದು ವೇಳೆ ನವಜೋತ್ ಸಿಂಗ್ ಸಿಧು ಪಾಕಿಸ್ತಾನಕ್ಕೆ ಹೋದರೇ ಅವರ ರಾಜಕೀಯ ಜೀವನದ ಮೇಲೆ ಬಹುದೊಡ್ಡ ಪರಿಣಾಮ ಬೀರುತ್ತದೆ, ಜನ ಅವರನ್ನು ದೇಶದ್ರೋಹಿ ಎಂದು ಪರಿಗಣಿಸುತ್ತಾರೆ, ಯಾವತ್ತೂ ಅವರನ್ನು ಜನ ಕ್ಷಮಿಸುವುದಿಲ್ಲ ಎಂದು ಹೇಳಿದ್ದಾರೆ.

BJP,Subramanian Swamy, Navjot Singh Sidhu, Imran Khan, Pakistan

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ