ನವದೆಹಲಿ:ಆ-14: ಇಡೀ ದೇಶಾದ್ಯಂತ 72ನೇ ಸ್ವಾತಂತ್ರ್ಯ ದಿನಾಚರಣೆಗೆ ಕ್ಷಣಗಣನೆ ಆರಂಭವಾಗಿದ್ದು, ಸಂಭ್ರಮ ಮನೆ ಮಾಡಿದೆ. ಈ ನಡುವೆ ಪ್ಲಾಸ್ಟಿಕ್ ರಾಷ್ಟ್ರ ಧ್ವಜಗಳನ್ನು ಬಳಕೆ ಮಾಡದಂತೆ ಎಲ್ಲಾ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಆದೇಶ ನೀಡಿದೆ.
ಪ್ಲಾಸ್ಟಿಕ್ ಧ್ವಜಗಳ ಮಾರಾಟ, ಧ್ವಜಗಳ ಸಂಗ್ರಹ 2002ರ ಭಾರತದ ಧ್ವಜ ನೀತಿಗೆ ವಿರುದ್ಧವಾಗಿದೆ. ಈ ಹಿನ್ನಲೆಯಲ್ಲಿ ಪ್ಲಾಸ್ಟಿಕ್ ಧ್ವಜಗಳನ್ನು ಬಳಕೆ ಮಾಡದಂತೆ, ಒಂದೊಮ್ಮೆ ಬಳಕೆ ಮಾಡುವುದು ಕಂಡುಬಂದರೆ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸೂಚನೆ ನೀಡಿದೆ.
ರಾಷ್ಟ್ರಧ್ವಜ ಜನತೆಯ ಭರವಸೆ ಹಾಗೂ ಆಕಾಂಕ್ಷೆಯ ಪ್ರತೀಕ. ಅದಕ್ಕೆ ಸೂಕ್ತ ಗೌರವ ನೀಡಬೇಕು. ಪ್ಲಾಸ್ಟಿಕ್ ಧ್ವಜಗಳು ಜೈವಿಕವಾಗಿ ವಿಫಟಿತವಾಗುವುದಿಲ್ಲ. ಸ್ವಾತಂತ್ರ್ಯ ದಿನದಂದು ಇದನ್ನು ಬಳಸಿ ಎಲ್ಲೆಂದರಲ್ಲಿ ಬಿಸಾಡಿದರೆ ಅದರ ಗೌರವಕ್ಕೆ ಧಕ್ಕೆಯಾಗುತ್ತದೆ. ಹೀಗಾಗಿ ಈ ಬಗ್ಗೆ ಜನರಿಗೆ ಜಾಗೃತಿ ಮೂಡಿಸಬೇಕಿದೆ.
ಈ ಕುರಿತು ರಾಜ್ಯ ಸರ್ಕಾರಗಳು ಸಾಮೂಹಿಕ ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕೆಂದು ಕೇಂದ್ರ ಗೃಹ ಸಚಿವಾಲಯ ರಾಜ್ಯ ಸರ್ಕಾರಗಳಿಗೆ ಸಲಹೆ ನೀಡಿದೆ.
Independence Day, No Plastic Flags Please, Home Ministry