ಗೋ-ವಧೆ ಪ್ರತಿಬಂಧಕ ಮತ್ತು ಜಾನುವಾರು ಪರಿವೀಕ್ಷಣಾ ಕಾಯ್ದೆ ಪಾಲನೆಗೆ ಆಗ್ರಹಿಸಿ ಧರಣಿ ಸತ್ಯಾಗ್ರಹ

 

ಬೆಂಗಳೂರು, ಆ.14- ಸುಪ್ರೀಂಕೋರ್ಟ್ ಆದೇಶಗಳನ್ವಯ ಗೋ-ವಧೆ ಪ್ರತಿಬಂಧಕ ಮತ್ತು ಜಾನುವಾರು ಪರಿವೀಕ್ಷಣಾ ಕಾಯ್ದೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆಗ್ರಹಿಸಿ ಗೋವಂಶ ಜಾನುವಾರು ಹತ್ಯೆ ಮುಕ್ತ ಕರ್ನಾಟಕ ನಿರ್ಮಾಣ ಸಂಘಟನೆಗಳ ಒಕ್ಕೂಟ ಆ.17ರಂದು ಟೌನ್‍ಹಾಲ್ ಮುಂಭಾಗ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದೆ.
ಸುದ್ದಿಗೋಷ್ಠಿಯಲ್ಲಿ ವಿಶ್ವ ಪ್ರಾಣಿ ಕಲ್ಯಾಣ ಮಂಡಳಿ ಅಧ್ಯಕ್ಷ ದಯಾನಂದ ಸ್ವಾಮೀಜಿ ಮಾತನಾಡಿ, ಪ್ರತಿನಿತ್ಯ ಕಾನೂನು ಬಾಹಿರವಾಗಿ ಲಕ್ಷಾಂತರ ಗೋವು, ಕರು, ಎತ್ತು, ಎಮ್ಮೆ, ಕೋಣ, ಒಂಟೆ ಸೇರಿದಂತೆ ಮುಂತಾದ ಪಶು-ಪ್ರಾಣಿಗಳ ಮಾರಣಹೋಮ ನಡೆಯುತ್ತಿದೆ. ಅದನ್ನು ತಡೆಗಟ್ಟಬೇಕು ಎಂದು ತಿಳಿಸಿದರು.
ರಾಜ್ಯಾದ್ಯಂತ ಬಕ್ರೀದ್ ಹಾಗೂ ಇನ್ನಿತರ ದಿನಗಳಲ್ಲಿ ಸುಪ್ರೀಂಕೋರ್ಟ್ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಈ ಧರಣಿಯಲ್ಲಿ ಒತ್ತಾಯಿಸಲಾಗುವುದು ಎಂದರು.
ನಮ್ಮ ದೇಶವನ್ನು ಗೋಮಾಂಸ ಪ್ರಾಣಿ ಬಲಿಮುಕ್ತ ರಾಷ್ಟ್ರವನ್ನಾಗಿಸುವುದಕ್ಕೆ ಧರಣಿಯಲ್ಲಿ ಎಲ್ಲರಲ್ಲಿ ಮನವರಿಕೆ ಮಾಡುವುದಾಗಿ ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ