ಹಸಿರು ಕರ್ನಾಟಕ ಯೋಜನೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚಾಲನೆ

 

ಬೆಂಗಳೂರು, ಆ.15- ಹಸಿರು ಕರ್ನಾಟಕ ಯೋಜನೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಚಾಲನೆ ನೀಡಿದರು.
ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಸ್ವಾತಂತ್ಯೋತ್ಸವದ ಸಂದರ್ಭದಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ರಾಜ್ಯ ಪೆÇಲೀಸ್ ಮಹಾನಿರ್ದೇಶಕರಾದ ನೀಲಮಣಿ ಎನ್.ರಾಜು, ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಬಿ.ಎಂ.ವಿಜಯಶಂಕರ್ ಹಾಗೂ ವಿವಿಧ ಜಿಲ್ಲೆಗಳಿಂದ ಆಗಮಿಸಿದ 30 ರೈತರಿಗೆ ಸಸಿ ನೀಡುವ ಮೂಲಕ ಮುಖ್ಯಮಂತ್ರಿ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಕರ್ನಾಟಕ ಹಸಿರಾಗಿಸೋಣ ಎಂಬ ಪ್ರತಿಜ್ಞಾ ವಿಧಿಯನ್ನು ಮುಖ್ಯಮಂತ್ರಿಗಳು ಬೋಧಿಸಿದರು.

ಮನೆಗೊಂದು ಮರ ಊರಿಗೊಂದು ವನ, ಬೆಟ್ಟ, ಗುಡ್ಡ, ಗೋಮಾಳ, ಕೆರೆ ಹಾಗೂ ಮನೆಯಂಗಳದಲ್ಲಿ ಗಿಡ ನೆಟ್ಟು ರಕ್ಷಿಸೋಣ. ನೈಸರ್ಗಿಕ ಅರಣ್ಯ ಹಾಗೂ ವನ್ಯ ಸಂಪತ್ತನ್ನು ಸಂರಕ್ಷಿಸೋಣ ಎಂಬ ಪ್ರತಿಜ್ಞಾ ವಿಧಿಯನ್ನು ಮುಖ್ಯಮಂತ್ರಿಗಳು ಬೋಧಿಸಿದರು.
ಇದಕ್ಕೂ ಮುನ್ನ ಸ್ವಾತಂತ್ರ್ಯ ದಿನಾಚರಣೆಗೆ ಆಗಮಿಸಿದ ಗಣ್ಯರೊಂದಿಗೆ ಶುಭಾಶಗಳನ್ನು ಸಿಎಂ ವಿನಿಮಯ ಮಾಡಿಕೊಂಡರು.
ವಿಧಾನಪರಿಷತ್ತಿನ ಸಭಾಪತಿ ಬಸವರಾಜಹೊರಟ್ಟಿ, ಬೆಂಗಳೂರು ನಗರ ಆಯುಕ್ತ ಸುನಿಲ್‍ಕುಮಾರ್, ಸ್ವಾತಂತ್ರ್ಯ ಹೋರಾಟಗಾರರು ಸೇರಿದಂತೆ ವಿವಿಧ ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಸೂಕ್ತ ಪೆÇಲೀಸ್ ಬಿಗಿ ಭದ್ರತೆ ನಡುವೆ ಶಾಂತಿಯುತವಾಗಿ ರಾಜ್ಯ ಮಟ್ಟದ ಸ್ವಾತಂತ್ರ್ಯೋತ್ಸವ ದಿನಾಚರಣೆ ನೆರವೇರಿತು.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಷ್ಟ್ರ ಧ್ವಜಾರೋಹಣ ಮಾಡುತ್ತಿದ್ದಂತೆ ಸೇನಾ ಹೆಲಿಕಾಫ್ಟರ್‍ನಿಂದ ಪುಷ್ಪವೃಷ್ಟಿ ಮಾಡಲಾಯಿತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ