ಬೆಂಗಳೂರು:ಆ-16: ಮಾಜಿ ಪ್ರಧಾನಿ ಅಟಲ್ರಂಥ ಮಹಾನ್ ಮುತ್ಸದ್ಧಿಯನ್ನು ದೇಶ ಕಳೆದುಕೊಂಡಿದೆ. ಆಧುನಿಕ ಭಾರತ ಕಂಡ ಅಪರೂಪದ ಮೌಲಿಕ ರಾಜಕಾರಣಿ ವಾಜಪೇಯಿ. ಅಜಾತ ಶತ್ರುವಿನ ನಿಧನದಿಂದ ಅತೀವ ದುಃಖವಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿ, ಅವರೊಬ್ಬ ಅತ್ಯದ್ಭುತ ಸಂಸದೀಯ ಪಟು ಆಗಿದ್ರು. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಅಂತಿಮ ದರ್ಶನಕ್ಕೆ ದೆಹಲಿಗೆ ಹೋಗುತ್ತೇನೆ. ಸೋಲನ್ನೆಂದೂ ಒಪ್ಪಲಾರೆ, ಹೊಸ ಸವಾಲುಗಳಿಗೆಂದೂ ಹೆದರಲಾರೆ ಎನ್ನುವ ಅವರ ಕವನದ ಸಾಲೊಂದು ವಾಜಪೇಯಿ ಅವರ ವ್ಯಕ್ತಿತ್ವಕ್ಕೆ ಹಿಡಿದ ಕನ್ನಡಿ. ಭ್ರಾತೃತ್ವ ಮತ್ತು ಸಹಬಾಳ್ವೆಯಲ್ಲಿ ಅಪರಿಮಿತ ನಂಬಿಕೆ ಇಟ್ಟ ಅವರು ಅತ್ಯುತ್ತಮ ವಾಗ್ಮಿ ಮತ್ತು ಆದರ್ಶ ಸಂಸದೀಯ ಪಟುವಾಗಿದ್ದರು. ವೈಯಕ್ತಿಕವಾಗಿ ನಾನು ಅವರನ್ನು ಭೇಟಿ ಮಾಡಿದ್ದೆ. ಅವರ ಸೌಜನ್ಯ ನಮಗೆಲ್ಲರಿಗೂ ಆದರ್ಶ ಎಂದು ತಿಳಿಸಿದ್ದಾರೆ.
ಆಧುನಿಕ ಭಾರತ ಕಂಡ ಅಪರೂಪದ ಮೌಲಿಕ ರಾಜಕಾರಣಿ ವಾಜಪೇಯಿ; ಅವರ ನಿಧನದಿಂದ ದೇಶ ಒಬ್ಬ ದಾರ್ಶನಿಕ ವ್ಯಕ್ತಿತ್ವದ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ ಎಂದು ಸಂತಾಪ ವ್ಯಕ್ತಪಡಿಸಿದರು.