ಬೆಂಗಳೂರು:ಆ-16: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ನಿಧನ ಹಿನ್ನೆಲೆಯಲ್ಲಿ ದೇಶಾದ್ಯಂತ ಏಳು ದಿನ ಶೋಕಾಚರಣೆ ಘೋಷಿಸಲಾಗಿದ್ದು, ರಾಜ್ಯದಲ್ಲೂ ನಾಳೆ ಸಾರ್ವಜನಿಕ ರಜೆಯನ್ನು ಘೋಷಿಸಲಾಗಿದೆ.
ರಾಜ್ಯಾದ್ಯಂತ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ರಾಜ್ಯ ಸರ್ಕಾರದಿಂದ ಸರ್ಕಾರಿ ರಜೆ ಘೋಷಿಸಿದೆ.
ಈ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಅವರಿಂದ ಆದೇಶ ಹೊರಡಿಸಲಾಗಿದ್ದು, ಸರ್ಕಾರಿ ಕಟ್ಟಡಗಳಲ್ಲಿ ಅರ್ಧಕ್ಕೆ ಧ್ವಜ ಹಾರಿಸುವಂತೆ ಸೂಚಿಸಿದ್ದಾರೆ.