ವಾಜಪೇಯಿ ನಿಧನಕ್ಕೆ ದೇಶಾದ್ಯಂತ 7 ದಿನ ಶೋಕಾಚರಣೆ: ರಾಜ್ಯದಲ್ಲಿ ನಾಳೆ ಸಾರ್ವಜನಿಕ ರಜೆ

ಬೆಂಗಳೂರು:ಆ-16: ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ ನಿಧನ ಹಿನ್ನೆಲೆಯಲ್ಲಿ ದೇಶಾದ್ಯಂತ ಏಳು ದಿನ ಶೋಕಾಚರಣೆ ಘೋಷಿಸಲಾಗಿದ್ದು, ರಾಜ್ಯದಲ್ಲೂ ನಾಳೆ ಸಾರ್ವಜನಿಕ ರಜೆಯನ್ನು ಘೋಷಿಸಲಾಗಿದೆ.

ರಾಜ್ಯಾದ್ಯಂತ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ರಾಜ್ಯ ಸರ್ಕಾರದಿಂದ ಸರ್ಕಾರಿ ರಜೆ ಘೋಷಿಸಿದೆ.

ಈ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್​ ಅವರಿಂದ ಆದೇಶ ಹೊರಡಿಸಲಾಗಿದ್ದು, ಸರ್ಕಾರಿ ಕಟ್ಟಡಗಳಲ್ಲಿ ಅರ್ಧಕ್ಕೆ ಧ್ವಜ ಹಾರಿಸುವಂತೆ ಸೂಚಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ