ರಾಜ್ಯ ರಸ್ತೆ ಸಾರಿಗೆ ಸಂಸ್ಥೆ 9ನೇ ರಾಜ್ಯಮಟ್ದ ಮಹಾಧಿವೇಶನ

 

ಬೆಂಗಳೂರು,ಆ.16- ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕೇಂದ್ರ ಕನ್ನಡ ಕ್ರಿಯಾ ಸಮಿತಿಯು 9ನೇ ರಾಜ್ಯಮಟ್ದ ಮಹಾಧಿವೇಶನವನ್ನು ಆ.19ರಂದು ಬೆಳಗ್ಗೆ 11 ಗಂಟೆಗೆ ಗದಗದ ಜಗದ್ಗುರು ತೋಂಟದಾರ್ಯ ಕಲ್ಯಾಣ ಮಂಟಪದಲ್ಲಿ ಡಾ.ಸಿದ್ದಲಿಂಗ ಮಹಾಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಹಮ್ಮಿಕೊಳ್ಳಲಾಗಿದೆ.
ಕನ್ನಡ ಸಾಹಿತ್ಯ ಪರಿಷತ್‍ನ ಅಧ್ಯಕ್ಷ ಡಾ.ಮನುಬಳಿಗಾರ್ ಉದ್ಘಾಟಿಸಲಿದ್ದು, ಶಾಸಕ ಎಚ್.ಕೆ.ಪಾಟೀಲ್ ಅಧ್ಯಕ್ಷತೆ ವಹಿಸಲಿದ್ದಾರೆ.
ವಿಧಾನಪರಿಷತ್ ಸದಸ್ಯ ಎಸ್.ವಿ.ಸುಂಕನೂರ, ವ್ಯವಸ್ಥಾಪಕ ನಿರ್ದೇಶಕರು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಎಂ.ಜಿ ಹಿರೇಮಠ, ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರು, ಶರಣು ಗೋಗೇರಿ, ಗದಗದ ದಲಿತ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಡಾ.ಅರ್ಜುನ ಗೊಳಸಂಗಿ, ಗದಗ ವಿಭಾಗದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿಗಲಾದ ಎಫ್.ಸಿ.ಹಿರೇಮಠ ಮುಖ್ಯ ಅತಿಥಿಗಳಾಗಿ ಆಗಮಿಸುವರು.
ಕರಾರಾಸಂ ಸಂಸ್ಥೆ ಕೇಂದ್ರ ಕನ್ನಡ ಕ್ರಿಯಾ ಸಮಿತಿಯ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್‍ಗೌರವ ಕಾರ್ಯದರ್ಶಿಗಳು, ವ.ಚ.ಚನ್ನೇಗೌಡ ಆಶಯ ನುಡಿಯನ್ನಾಡಲಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ