ಬೆಂಗಳೂರು, ಆ.16- ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ವತಿಯಿಂದ ನಗರದ ಹೊರವಲಯದ ಕನಕಪುರ ರಸ್ತೆ ಶ್ರೀ ರವಿಶಂಕರ ಗುರೂಜಿ ಆಶ್ರಮದಲ್ಲಿ ಇದೇ 18 ಮತ್ತು 19ರಂದು 71ನೆ ರಾಷ್ಟ್ರೀಯ ಮಂಡಳಿ ಸಮಾವೇಶವನ್ನು ಏರ್ಪಡಿಸಲಾಗಿದೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಆರ್ಟ್ ಆಫ್ ಲಿವಿಂಗ್‍ನ ಶ್ರೀ ರವಿಶಂಕರ ಗುರೂಜಿ ಸಾನಿಧ್ಯ ವಹಿಸಲಿದ್ದಾರೆ.
ಆ.18ರಂದು ಬೆಳಗ್ಗೆ 10 ಗಂಟೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಉದ್ಘಾಟನೆ ಮಾಡಲಿರುವ ಕಾರ್ಯಕ್ರಮದಲ್ಲಿ ನಿವೃತ್ತ ಲೋಕಾಯುಕ್ತ ನ್ಯಾ.ಎನ್.ಸಂತೋಷ್ ಹೆಗಡೆ, ಸಚಿವ ಡಿ.ಸಿ.ತಮ್ಮಣ್ಣ, ಶಾಸಕ ಎಸ್.ಟಿ.ಸೋಮಶೇಖರ್, ಮೇಯರ್ ಸಂಪತ್‍ರಾಜ್ ಮುಂತಾದವರು ಪಾಲ್ಗೊಳ್ಳಲಿದ್ದಾರೆ.
ಸಮಾರಂಭದ ಅಧ್ಯಕ್ಷತೆಯನ್ನು ರಾಷ್ಟ್ರೀಯ ಒಕ್ಕೂಟದ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನ್ ವಹಿಸಲಿದ್ದಾರೆ. ಅಂದು ಸಂಜೆ ಸಮ್ಮಿಶ್ರ ಸರ್ಕಾರವೊ ಏಕೈಕ ಪಕ್ಷ ಆಡಳಿತವೋ ಎಂಬುದರ ಕುರಿತು ವಿಚಾರ ಸಂಕಿರಣ ಏರ್ಪಡಿಸಲಾಗಿದೆ.
ಸಚಿವರಾದ ಯು.ಟಿ.ಖಾದರ್, ಆರ್.ಶಂಕರ್, ರಾಜ್ಯಸಭಾ ಸದಸ್ಯ ಕೆ.ಸಿ.ರಾಮಮೂರ್ತಿ, ಪತ್ರಕರ್ತರಾದ ರವಿ ಹೆಗಡೆ, ಎಸ್.ಕೆ.ಶಾಮಸುಂದರ್ ಮುಂತಾದವರು ಪಾಲ್ಗೊಳ್ಳಲಿದ್ದಾರೆ.
ಆ.19ರ ಸಮಾರೋಪ ಸಮಾರಂಭದಲ್ಲಿ ಡಾ.ಜಿ.ಪರಮೇಶ್ವರ್, ಬಂಡೆಪ್ಪ ಕಾಶಂಪೂರ್, ರಮೇಶ್ ಜಾರಕಿಹೊಳಿ, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.