
ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ. ಕಳೆದ 24 ಗಂಟೆಗಳಲ್ಲಿ ವಾಜಪೇಯಿ ಆರೋಗ್ಯ ಇನ್ನಷ್ಟು ಕ್ಷೀಣಿಸಿದೆ ಎಂದು ಏಮ್ಸ್ ಆಸ್ಪತ್ರೆ ತಿಳಿಸಿದೆ.
ವಾಜಪೇಯಿ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದು ಇದೀಗ ನಿರ್ಣಾಯಕ ಅಹಂತ ತಲುಪಿದೆ. ಸದ್ಯ ಅವರಿಗೆ ಆಮ್ಲಜನಕದ ಬೆಂಬಲ ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಧುಮೇಹ, ಮೂತ್ರದ ಸೋಂಕು ಸೇರಿ ವಿವಿಧ ರೀತಿಯ ಅನಾರೋಗ್ಯದ ಕಾರಣ ಕಳೆದ ಜೂನ್ 11ರಂದು ವಾಜಪೇಯಿ ಏಮ್ಸ್ ಗೆ ದಾಖಲಾಗಿದ್ದರು. ವಾಜಪೇಯಿ ಆರೋಗ್ಯ ಏರುಪೇರು ಹಿನ್ನೆಲೆ ಕೇಂದ್ರ ಸಚಿವ ಪಿಯೂಷ್ ಗೋಯಲ್ ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ರು. ಇದಕ್ಕೂ ಮೊದಲು ಪ್ರಧಾನಿ ಮೋದಿ ಸೇರಿ ಹಲವು ನಾಯಕರು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.