ಮಳೆ ಹಾನಿಗೊಳಗಾದ ಜಿಲ್ಲೆಗಳಿಗೆ 200 ಕೋಟಿ

ಬೆಂಗಳೂರು:ಆ-17: ಭಾರೀ ಮಳೆಯಿಂದ ಹಾನಿಗೊಳಗಾಗಿರುವ ಜಿಲ್ಲೆಗಳ ಅಭಿವೃದ್ಧಿಗಾಗಿ 200 ಕೋಟಿ ರೂಪಾಯಿ ನೀಡುವುದಾಗಿ ಮುಖ್ಯಮಂತ್ರಿ ಎಚ್​. ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ನದಿಗಳು ಅಪಾಯದಮಟ್ಟ ಮೀರಿ ಹರಿದಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಕೊಡಗು-ಮಂಗಳೂರು ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗುತ್ತಿದ್ದು ರಸ್ತೆಗಳೆಲ್ಲ ನೀರಿನಿಂದ ತುಂಬಿವೆ. ಧಾರಾಕಾರ ಮಳೆ ಹಾಗೂ ಭೂ ಕುಸಿತದಿಂದ ಜಿಲ್ಲೆಯ ಜನರು ಸಂಕಷ್ಟಕ್ಕೀಡಾಗಿದ್ದಾರೆ.

ಈ ಹಿನ್ನಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳ ಪರಾಮರ್ಶೆಹಿನ್ನಲೆಯಲ್ಲಿ ಮಾತನಾಡಿರುವ ಸಿಎಂ ಕುಮಾರಸ್ವಾಮಿ, ಈಗಾಗಲೇ 29 ನಿರಾಶ್ರಿತ ಕ್ಯಾಂಪ್​ಗಳನ್ನು ನಿರ್ಮಿಸಲಾಗಿದ್ದು, 1755 ಜನರು ಅಲ್ಲಿ ಆಶ್ರಯ ಪಡೆದಿದ್ದಾರೆ. ನೆರೆ ಪೀಡಿತ ಜಿಲ್ಲೆಗಳ ಅಭಿವೃದ್ಧಿಗೆ 200 ಕೋಟಿ ರೂಪಾಯಿ ನೀಡಲಾಗುವುದು ಎಂದು ಹೇಳಿದರು.

ಕೊಡಗಿನಲ್ಲಿ ವಾಡಿಕೆಗಿಂತ ಶೇ. 175, ಉಡುಪಿಯಲ್ಲಿ ಶೇ.62, ಶಿವಮೊಗ್ಗದಲ್ಲಿ ಶೇ.117, ಚಿಕ್ಕಮಗಳೂರಿನಲ್ಲಿ ಶೇ.170, ಹಾಸನದಲ್ಲಿ ಶೇ.130 ಹಾಗೂ ಉತ್ತರ ಕನ್ನಡದಲ್ಲಿ ಶೇ.81ರಷ್ಟು ಹಚ್ಚುವರಿ ಮಳೆಯಾಗಿದೆ. ಕೊಡಗಿನಲ್ಲಿ ಇಬ್ಬರು, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ ಈ ಹಿನ್ನೆಲೆಯಲ್ಲಿ ಅಲ್ಲಿನ ಹಾನಿಗಳನ್ನು ತಡೆಯಲು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ