ಬೆಂಗಳೂರು, ಆ.17-ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಎಂ.ಕನಗವಲ್ಲಿ ಸೇರಿದಂತೆ ಐದು ಮಂದಿ ಐಎಎಸ್ ಅಧಿಕಾರಿಗಳನ್ನು ರಾಜ್ಯಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಯಾಗಿ ಅಜುಮ್ ಪರ್ವೇಜ್, ವಸತಿ ಇಲಾಖೆ ಕಾರ್ಯದರ್ಶಿಯಾಗಿ ಡಾ.ಜೆ.ರವಿಶಂಕರ್, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಎನ್.ಜಯರಾಮ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯ ಆಯುಕ್ತರಾಗಿ ಎಂ.ಕನಗವಲ್ಲಿ ಹಾಗೂ ಮೈಸೂರು ಜಿ.ಪಂ. ಮುಖ್ಯ ನಿರ್ವಹಣಾಧಿಕಾರಿಯಾಗಿ ಕೆ.ಜ್ಯೋತಿ ಅವರನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ.