ಬೆಂಗಳೂರು,ಆ.17- ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ 71ನೇ ರಾಷ್ಟ್ರೀಯ ಸಮಾವೇಶವನ್ನು ನಾಳೆ ಮತ್ತು 19ರಂದು ನಗರದ ಕನಕಪುರ ರಸ್ತೆಯಲ್ಲಿರುವ ಶ್ರೀ ರವಿಶಂಕರಗುರೂಜಿ ಆರ್ಟ್ ಆಫ್ ಲೀವಿಂಗ್‍ನಲ್ಲಿ ಹಮ್ಮಿಕೊಳ್ಳಲಾಗಿದೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಉದ್ಘಾಟನೆಯನ್ನು ನೇರವೇರಿಸಲಿದ್ದು, ಪರಮ ಪೂಜ್ಯ ಗುರುದೇವ ಶ್ರೀ ರವಿ ಶಂಕರ್ ಗುರೂಜಿ ಸಾನಿಧ್ಯದಲ್ಲಿ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ನಿವೃತ್ತ ಲೋಕಾಯುಕ್ತ ಸಂತೋಷ ಹೆಗಡೆ, ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ಸ್ಥಳೀಯಶಾಸಕರಾದ ಎಸ್.ಟಿ.ಸೋಮಶೇಖರ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎನ್.ರಾಜು, ಪ್ರಧಾನ ಕಾರ್ಯದರ್ಶಿ ಎಚ್.ಬ.ಮದನಗೌಡ ಮತ್ತು ಮತ್ತಿತರರು ಭಾಗವಹಿಸಲಿದ್ದಾರೆ.
ಏಕೈಕ ಪಕ್ಷಾಡಳಿತವೋ ಎಂಬ ವಿಷಯದ ಬಗ್ಗೆ ವಿಚಾರ ಸಂಕಿರಣವನ್ನು ನಗರಾಭಿವೃದ್ಧಿ ಹಾಗೂ ವಸತಿ ಸಚಿವ ಯು.ಟಿ.ಖಾದರ್ ಉದ್ಘಾಟಿಸಲಿದ್ದಾರೆ.
ಅರಣ್ಯ ಮತ್ತು ಪರಿಸರ ಸಂರಕ್ಷಣೆ ಸಚಿವರಾದ ಆರ್.ಶಂಕರ್ ಪತ್ರಕರ್ತ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಲಿದ್ದಾರೆ. ಈ ಸಮಯದಲ್ಲಿ ಪತ್ರಕರ್ತರಾದ ರವಿ ಹೆಗಡೆ, ಚಿಂತಕ ಬಸವರಾಜ್ ಪಾಟೀಲ್ ಕೆ.ಸಿ.ರಾಮಮೂರ್ತಿತರರು ವಿಷಯ ಮಂಡಿಸಲಿದ್ದಾರೆ.
ಭಾನುವಾರ(ಆ.19) ಮಧ್ಯಾಹ್ನ 3 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ , ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಮತ್ತು ಸಹಕಾರ ಸಚಿವರಾದ ಬಂಡೆಪ್ಪ ಕಾಂಶ್ಯಂಪುರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.