ನಿರುದ್ಯೋಗಿಗಳಿಗೆ ಉಚಿತ ಫೋಟೋಗ್ರಫಿ ಮತ್ತು ವಿಡಿಯೋ ಗ್ರಫಿ ತರಬೇತಿ

ಬೆಂಗಳೂರು,ಆ.17- ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಟ್ರೈನಿಂಗ್ ಇನ್‍ಸ್ಟಿಟ್ಯೂಟ್ ವತಿಯಿಂದ ಸೆಪ್ಟೆಂಬರ್ 2ನೇ ವಾರದಿಂದ 30 ದಿನಗಳ ಕಾಲ ನಿರುದ್ಯೋಗಿಗಳಿಗೆ ಉಚಿತವಾಗಿ ಫೋಟೋಗ್ರಫಿ ಮತ್ತು ವಿಡಿಯೋ ಗ್ರಫಿ ತರಬೇತಿ ನೀಡಲಾಗುತ್ತಿದೆ.

18ರಿಂದ 45 ವರ್ಷದಬೆಂಗಳೂರು ಗ್ರಾಮಾಂತರ ಜಿಲ್ಲೆ , ಬೆಂಗಳೂರು ನಗರ, ಕೋಲಾರ ಜಿಲ್ಲೆ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ನಿರುದ್ಯೋಗ ಯುವಕರು ಕೆನರಾ ಬ್ಯಾಂಕ್ ಟ್ರೈನಿಂಗ್ ಇನ್‍ಸ್ಟಿಟ್ಯೂಟ್, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು ಇಲ್ಲಿ ಆ.27ರಂದು ಬೆಳಗ್ಗೆ 10.30ಕ್ಕೆ ನಡೆಯುವ ನೇರ ಸಂದರ್ರ್ಶನಕ್ಕೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗೆ ಮೊ: 9632559897, 9900047146 ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ