ಪ್ರವಾಹ ಪೀಡಿತ ಕೇರಳಕ್ಕೆ ನೆರವು ಘೋಷಿಸಿದ ಯುಎಇ ಸರ್ಕಾರ

ಅಬುದಾಬಿ:ಆ-18: ದೇವರನಾಡು ಕೇರಳದಲ್ಲಿ ಸಂಭವಿಸಿರುವ ಭೀಕರ ಪ್ರವಾಹಕ್ಕೆ ಸಂಬಂಧಿಸಿದಂತೆ ಯುಎಇ ಸರ್ಕಾರ ಪ್ರತಿಕ್ರಿಯಿಸಿದ್ದು, ಪ್ರವಾಹ ಪೀಡಿತ ಕೇರಳಕ್ಕೆ ನೆರವು ನೀಡುವುದಾಗಿ ಘೋಷಿಸಿದೆ.

ಈ ಬಗ್ಗೆ ಯುಎಇ ಅದ್ಯಕ್ಷರಾದ ಶೇಖ್ ಖಲೀಫಾ ಅವರು ಪ್ರತಿಕ್ರಿಯಿಸಿದ್ದು, ಕೂಡಲೇ ಕೇರಳ ನಿರಾಶ್ರಿತರಿಗೆ ನೆರವು ನೀಡುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಅಲ್ಲದೆ ಈ ಸಂಬಂಧ ಸಮಿತಿಯೊಂದನ್ನು ರಚನೆ ಮಾಡುವಂತೆಯೂ ಸೂಚಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಯುಎಇ ಉಪಾಧ್ಯಕ್ಷ ಶೇಖ್ ಮೊಹಮದ್ ಬಿನ್ ರಷೀದ್ ಅಲ್ ಮಕ್ತೌಮ್ ಅವರು, ಕೇರಳಕ್ಕೆ ಸಂಬಂಧಿಸಿದಂತೆ ನಮ್ಮ ರಾಷ್ಟ್ರ ವಿಶೇಷ ಕಾಳಜಿ ಹೊಂದಿದೆ. ಪ್ರವಾಹ ಪೀಡಿತ ಕೇರಳ ಸಂಕಷ್ಟದಲ್ಲಿದ್ದು, ನೆರವು ನೀಡುವುದು ನಮ್ಮ ಕರ್ತವ್ಯ. ಕೇರಳ ನಮ್ಮ ಯಶಸ್ಸಿನ ಮೂಲ ಎಂದು ಅವರು ಹೇಳಿದ್ದಾರೆ.

ಹಿಂದಿನಿಂದಲೂ ಕೇರಳಿಗರು ನಮ್ಮ ದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ. ನಮ್ಮ ದೇಶದ ಅಭಿವೃದ್ಧಿಯಲ್ಲಿ ಅವರ ಪಾತ್ರ ಕೂಡ ಗಣನೀಯ. ಹೀಗಾಗಿ ಕೇರಳಕ್ಕೆ ನೆರವು ನೀಡುವುದು ನಮ್ಮ ಜವಾಬ್ದಾರಿ ಎಂದು ನಾವು ಭಾವಿಸಿದ್ದೇವೆ ಎಂದು ತಿಳಿಸಿದ್ದಾರೆ.

Kerala floods, UAE extends helping hand, urges everyone to contribute generously

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ