ಗಡಿ ನುಸುಳಲು ಯತ್ನಿಸಿದ್ದ ಮೂವರು ಉಗ್ರರ ಹತ್ಯೆ

ಶ್ರೀನಗರ:ಆ-19: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯ ತಂಗ್ಧಾರ್ ಸೆಕ್ಟರ್ ಬಳಿ ಗಡಿ ನುಸುಳಲು ಯತ್ನ ನಡೆಸುತ್ತಿದ್ದ ಮೂವರು ಉಗ್ರರನ್ನು ಭಾರತೀಯ ಸೇನಾಪಡೆ ಸದೆಬಡಿದಿದೆ.

ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ತಂಗ್ಧಾರ್ ಸೆಕ್ಟರ್ ಬಳಿಯ ಗಡಿ ನಿಯಂತ್ರಣ ರೇಖೆ ಬಳಿ ಉಗ್ರರು ಒಳ ನುಸುಳಲು ಯತ್ನ ನಡೆಸುತ್ತಿದ್ದರು. ಈ ವೇಳೆ ಗಸ್ತು ತಿರುಗುತ್ತಿದ್ದ ಭಾರತೀಯ ಸೇನಾಪಡೆ ಉಗ್ರರನ್ನು ಹತ್ಯೆ ಮಾಡಿದೆ. ಸ್ಥಳದಲ್ಲಿ ಮತ್ತಷ್ಟು ಉಗ್ರರಿರುವ ಶಂಕೆಗಳು ವ್ಯಕ್ತವಾಗಿರುವ ಹಿನ್ನಲೆಯಲ್ಲಿ ಕಾರ್ಯಾಚರಣೆ ಮುಂದುವರೆದಿದೆ.

ಉಗ್ರರನ್ನು ಹತ್ಯೆ ಮಾಡಿರುವ ಕುರಿತಂತೆ ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ಎಸ್.ಪಿ.ವೈದ್ ಅವರು ದೃಢಪಡಿಸಿದ್ದು, ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿದ್ದಾರೆ.

Jammu and Kashmir ,Three terrorists killed, Indian Army, foils infiltration bid along LoC

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ