ಜಕಾರ್ತ:ಆ-20: ಏಷ್ಯನ್ ಗೇಮ್ಸ್ನಲ್ಲಿ ಭಾರತಕ್ಕೆ ಫ್ರೀಸ್ಟೈಲ್ ಕುಸ್ತಿಯಲ್ಲಿ ಮೊದಲ ಚಿನ್ನದ ಪದಕ ತಂದುಕೊಟ್ಟ ಬಜರಂಗ್ ಪೂನಿಯಾ ತಮ್ಮ ಗೆಲುವನ್ನ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಸಮರ್ಪಣೆ ಮಾಡಿದ್ದಾರೆ.
ಫೈನಲ್ ಪಂದ್ಯದಲ್ಲಿ ಜಪಾನ್ನ ಟಕತನಿ ಡೈಚಿ ಅವರನ್ನು 11-8ರ ಅಂತರದಿಂದ ಮಣಿಸಿದ ಬಜರಂಗ್ (65 ಕೆ.ಜಿ ಫ್ರೀಸ್ಟೈಲ್ ವಿಭಾಗದಲ್ಲಿ) ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದರು. ಬಳಿಕ ಟ್ವೀಟ್ ಮಾಡಿ, ಈ ಪದಕವನ್ನು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಸಮರ್ಪಿಸುತ್ತಿದ್ದೇನೆ ಎಂದು ಹೇಳಿದ್ದಾರೆ.
ಇನ್ನು ಇದೇ ವೇಳೆ, ಒಲಂಪಿಕ್ ಪದಕ ವಿಜೇತ ಯೋಗೇಶ್ವರ್ ದತ್ಗೆ ಕೊಟ್ಟ ಮಾತು ಉಳಿಸಿಕೊಂಡಿದ್ದೇನೆ. ಅವರು ನನ್ನ ಯಶಸ್ಸಿನ ಮಾರ್ಗದರ್ಶಿ ಎಂದು ಪೂನಿಯಾ ತಿಳಿಸಿದ್ದಾರೆ.
asian games 2018, Bajrang Punia,India’s ‘gold’