ಬೆಂಗಳೂರು:ಆ-20: ಭೀಕರ ಪ್ರವಾಹದಿಂದ ತತ್ತರಿಸಿರುವ ಕೊಡಗು ಸಂತ್ರಸ್ತರಿಗೆ ಸಹಾಯ ಮಾಡುವಂತೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮನವಿ ಮಾಡಿದ್ದು, ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಾರ್ವಜನಿಕರು ಕೊಡುಗೆ ನೀಡುವಂತೆ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಮುಖ್ಯಮಂತ್ರಿಗಳ ವಿಕೋಪ ಪರಿಹಾರ ನಿಧಿ ವಿಧಾನಸೌಧ ವಿಳಾಸಕ್ಕೆ ಚೆಕ್ ಅಥವಾ ಡಿಡಿ ರೂಪದಲ್ಲಿ ಹಣ ಕಳುಹಿಸುವಂತೆ ತಿಳಿಸಿದ್ದಾರೆ.
ಈ ನಡುವೆ ಕೊಡಗಿನ ಸಂತ್ರಸ್ತರಿಗೆ ಸಹಾಯ ಮಾಡಿ ಎಂದು ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಕೂಡ ಸಿಎಂ ಟ್ವೀಟನ್ನು ತಮ್ಮ ಇನ್ಸ್ಟಾಗ್ರಾಮ್ ಅಕೌಂಟ್ ನಲ್ಲಿ ಶೇರ್ ಮಾಡಿ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.