ಏಷ್ಯನ್ ಗೇಮ್ಸ್ 2018: ಭಾರತಕ್ಕೆ ಮತ್ತೊಂದು ಬೆಳ್ಳಿ, ಟ್ರ್ಯಾಪ್ ಶೂಟಿಂಗ್ ನಲ್ಲಿ ಲಕ್ಷಯ್ ಗೆ ರಜತ

ಜಕಾರ್ತಾ: ಇಂಡೋನೇಷಿಯಾದಲ್ಲಿ ನಡೆಯುತ್ತಿರುವ  ಏಷ್ಯನ್ ಗೇಮ್ಸ್ ಹದಿನೆಂಟನೇ ಆವೃತ್ತಿಯಲ್ಲಿ ಎರಡನೇ ದಿನವಾದ ಇಂದು ಭಾರತಕ್ಕೆ ಎರಡನೇ ಬೆಳ್ಳಿ ಪದಕ ಲಭಿಸಿದೆ.
ಪುರುಷರ ಟ್ರ್ಯಾಪ್ ಶೂಟಿಂಗ್ ನಲ್ಲಿ ಭಾರತದ ಲಕ್ಷಯ್ ಶಿಯೊರಾನ್ ಬೆಳ್ಳಿ ಪದಕ ಗೆದ್ದಿದ್ದಾರೆ.
ಲಕ್ಷಯ್ ಒಟ್ಟು 50 ಪಾಯಿಂಟ್ ಗಳಲ್ಲಿ 43 ಪಾಯಿಂಟ್  ಗಳಿಸುವುದರೊಡನೆ ರಜತ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ.
ಇದೇ ವಿಭಾಗದಲ್ಲಿ ಭಾರತದ ಮಾನವ್ಜಿತ್ ಸಿಂಗ್ ಸಿಧು ನಾಲ್ಕನೇ ಸ್ಥಾನ ಪಡೆದಿದ್ದಾರೆ.
ಸ್ಪರ್ಧೆಯಲ್ಲಿ ಚೈನಾ ತೈಪೆಯ ಯಾಂಗ್ ಕುನ್ಪಿ  ಚಿನ್ನದ ಪದಕ ಗಳಿಸಿಕೊಂಡರು.
ಇದಕ್ಕೂ ಮುನ್ನ ಪುರುಷರ 10 ಮೀಟರ್ ಏರ್ ರೈಫಲ್ ವಿಭಾಗದಲ್ಲಿ ಭಾರತದ ದೀಪಕ್ ಕುಮಾರ್ ಬೆಳ್ಳಿ ಪದಕ ಗೆದ್ದಿದ್ದರು.
ಏಷ್ಯನ್ ಕ್ರೀಡಾಕೂಟದಲ್ಲಿ ಭಾರತ ಇದುವರೆಗೆ ಒಂದು ಚಿನ್ನ, ಎರಡು ಬೆಳ್ಳಿ ಹಾಗೂ ಒಂದು ಕಂಚಿನೊಡನೆ ನಾಲ್ಕು ಪದಕ ಗಳಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ