ಕೊಡಗಿನಲ್ಲಿ ಸಂತ್ರಸ್ತರ ರಕ್ಷಣೆಗೆ ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆ

 

ಬೆಂಗಳೂರು,ಆ.20- ಪ್ರಕೃತಿ ವಿಕೋಪಕ್ಕೆ ತುತ್ತಾಗಿರುವ ಕೊಡಗಿನಲ್ಲಿ ಸಂತ್ರಸ್ತರ ರಕ್ಷಣೆಗೆ ಸೇನೆ, ಎನ್‍ಡಿಆರ್‍ಎಫ್, ಅಗ್ನಿಶಾಮಕ ದಳ, ಸ್ಥಳೀಯ ಪೆÇಲೀಸರು ಸೇರಿದಂತೆ ಒಂದು ಸಾವಿರಕ್ಕೂ ಹೆಚ್ಚು ಸಿಬ್ಬಂದಿ ತಂಡ ಕಾರ್ಯಾಚರಣೆ ನಡೆಸುತ್ತಿದೆ.
ಕಳೆದ 15 ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ ತತ್ತರಿಸಿರುವ ಕೊಡಗಿನಲ್ಲಿ ಮಳೆಯ ಪ್ರಮಾಣ ಕೊಂಚ ತಗ್ಗಿದ್ದು , ನಾಲ್ಕು ದಿನಗಳಿಂದ ಕಾರ್ಯಾಚರಣೆ ನಡೆಸುತ್ತಿರುವ ವಿವಿಧ ತಂಡಗಳ ಕಾರ್ಯಾಚರಣೆ ಇಂದು ಸಂಜೆ ಬಹುತೇಕ ಮುಗಿಯಲಿದೆ.
ಭಾರೀ ಮಳೆಗೆ ಬೆಟ್ಟಗುಡ್ಡ ಕುಸಿದಿದ್ದು ಹಲವಾರು ಮನೆಗಳು ನೆಲಕ್ಕುರುಳಿದ್ದು,ರಸ್ತೆ ಸಂಪರ್ಕ ಕಡೆದುಕೊಂಡಿದ್ದು, ಈವರೆಗೆ ಎಂಟು ಮಂದಿ ಮೃತರಾಗಿದ್ದಾರೆ.
ಕೆಎಸ್‍ಆರ್‍ಪಿಯ ಮೂರು ತುಕಡಿ ಗರುಡಾ ಪಡೆ, ಕಮಾಂಡೊ ಪಡೆ ಕೂಡ ಸ್ಥಳದಲ್ಲಿದ್ದು, ಕೆಎಸ್‍ಆರ್‍ಪಿ ಎಡಿಜಿಪಿ ಭಾಸ್ಕರ್ ರಾವ್ ಅವರಲ್ಲಿ ಅಲ್ಲೇ ಮೊಕ್ಕಾಂ ಹೂಡಿದ್ದಾರೆ.
ಕಾರ್ಯಾಚರಣೆ ಪಡೆಗಳು ಅಪಾಯದಲ್ಲಿ ಸಿಲುಕಿರುವವರನ್ನು ರಕ್ಷಿಸಿ ನಿರಾಶ್ರಿತರ ಶಿಬಿರಗಳಿಗೆ ಸ್ಥಳಾಂತರ ಮಾಡುತ್ತಿವೆ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಕಮಲ್ ಪಂಥ್ ಅವರು ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ