ಸಿಎಂ ಅಜ್ಮಿರ್ ಪ್ರವಾಸ

 

ಬೆಂಗಳೂರು,ಆ.22-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಾಳೆ ಅಜ್ಮೀರ್ ಪ್ರವಾಸ ಕೈಗೊಂಡಿದ್ದಾರೆ.
ನಾಳೆ ಬೆಳಗ್ಗೆ ವಿಶೇಷ ವಿಮಾನದ ಮೂಲಕ ರಾಜಸ್ಥಾನಕ್ಕೆ ತೆರಳಲಿದ್ದಾರೆ. ರಾಜಸ್ಥಾನದ ಅಜ್ಮೀರ್ ಜಿಲ್ಲೆಯ ಪುಷ್ಕರ್‍ಗೆ ಭೇಟಿ ನೀಡಿ ಬ್ರಹ್ಮ ದೇವಾಲಯದಲ್ಲಿ ದರ್ಶನ ಪಡೆಯಲಿದ್ದಾರೆ.
ನಂತರ ಅಜ್ಮೀರ್ ದರ್ಗಾಗೆ ಭೇಟಿ ನೀಡಲಿದ್ದಾರೆ. ಒಂದು ದಿನದ ರಾಜಸ್ಥಾನದ ಪ್ರವಾಸ ಮುಗಿಸಿ ಸಂಜೆ ಬೆಂಗಳೂರಿಗೆ ಮರಳಲಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ