ನಿರಂತರವಾಗಿ ಸುರಿಯುತ್ತಿರುವ ಮಹಾಮಳೆಯಿಂದ ರಸ್ತೆ ಸಂಪರ್ಕ ಕಡಿತ

Land slide caused due to heavy rainfalls at Charmadi Ghat blocking the Chikmagalore-Mangalore and Dharmasthala roadways on Sunday. --KPN

 

ಬೆಳಗಾವಿ, ಆ.22- ನಿರಂತರವಾಗಿ ಸುರಿಯುತ್ತಿರುವ ಮಹಾಮಳೆಯಿಂದ ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಅನಾರೋಗ್ಯಕ್ಕೀಡಾಗಿದ್ದ ಮಹಿಳೆಯೊಬ್ಬರಿಗೆ ಚಿಕಿತ್ಸೆ ಕೊಡಿಸಲು ಸ್ಥಳೀಯರು ಬಿದಿರಿನ ಪಲ್ಲಕ್ಕಿಯಲ್ಲಿ ಹೊತ್ತೊಯ್ದು ಹೊಳೆ ದಾಟಿಸಿ ಚಿಕಿತ್ಸೆ ಕೊಡಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಗವಾಳಿ ಗ್ರಾಮದಲ್ಲಿ ನಡೆದಿದೆ.
ಪಶ್ಚಿಮ ಘಟ್ಟದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಹಾಮಳೆಗೆ ಮಹದಾಯಿ ಮತ್ತು ಮಲಪ್ರಭಾ ನದಿಗಳು ಉಕ್ಕಿ ಹರಿಯುತ್ತಿದ್ದು, ಖಾನಾಪುರ 13 ಹಳ್ಳಿಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ.
ಸಂಪರ್ಕ ಕಡಿತಗೊಂಡ ಹಿನ್ನೆಲೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಗವಾಳಿ ಗ್ರಾಮದ ಮಹಿಳೆಯನ್ನು ಬಿದಿರಿನ ಪಲ್ಲಕ್ಕಿಯಲ್ಲಿ ಹೊತ್ತು ಹೊಳೆ ದಾಟಿದ ಗವಾಳಿ ಗ್ರಾಮಸ್ಥರು ಮಹಿಳೆಯನ್ನು ಖಾನಾಪೂರ ಪಟ್ಟಣದ ಆಸ್ಪತ್ರೆಯಲ್ಲಿ ದಾಖಲಿಸಿz್ದÁರೆ.
ಗವಾಳಿ ಗ್ರಾಮ ಸಂಪರ್ಕ ಕಳೆದುಕೊಂಡ ಕಾರಣ ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯನ್ನು ಖಾನಾಪುರ ವರೆಗೆ ಬಿದುರಿನ ಪಲ್ಲಕ್ಕಿಯಲ್ಲಿ ಹೊತ್ತು ತಂದಿದ್ದು, ನಾಲ್ಕು ಹಳ್ಳಿಗಳ ಜನ ಸಂಕಷ್ಟದಲ್ಲಿz್ದÁರೆ. ಕಳೆದ ಎರಡು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಕಾಡಿನಲ್ಲಿ ಶೀತದ ವಾತಾವರಣ ಹೆಚ್ಚಾಗಿ ಅನಾರೋಗ್ಯಕ್ಕೆ ತುತ್ತಾಗುತ್ತಿರುವ ಮಹಿಳೆಯರು, ಮಕ್ಕಳು ಚಿಕಿತ್ಸೆ ಸಿಗದೆ ಪರದಾಡುತ್ತಿz್ದÁರೆ.
ಮಹದಾಯಿ ನದಿ ತುಂಬಿ ಹರಿಯುತ್ತಿದ್ದು, ಗ್ರಾಮಗಳ ಸಂಪರ್ಕ ರಸ್ತೆ ಜಲಾವೃತಗೊಂಡಿದ್ದು, ಸ್ಥಳೀಯರು ಪರದಾಡುವಂತಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ