ಬೆಂಗಳೂರು,ಆ.22- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಆಹಾರ ನಾಗರಿಕ ಸರಬರಾಜು ಸಚಿವ ಜಮೀರ್ ಅಹಮ್ಮದ್ ಖಾನ್ ಮಲೆಮಹದೇಶ್ವರ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಬಕ್ರೀದ್ ಹಬ್ಬದ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದ ಅವರು ನಂತರ ಮಲೆಮಹದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯಕೊಡಗಿನಲ್ಲಿ ಉಂಟಾಗಿರುವ ಮಳೆ ಅನಾಹುತ, ಪರಿಹಾರ ಕಾರ್ಯದ ಬಗ್ಗೆ ಸರ್ಕಾರದ ಗಮನಸೆಳೆಯಲಾಗುವುದು.ಕೊಡಗಿಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಪರಿಶೀಲಿಸುವುದಷ್ಟೇ ಅಲ್ಲ ಪರಿಹಾರವನ್ನು ಕೂಡ ನೀಡಬೇಕಾಗಿದೆ.
ಕೊಡಗಿನಲ್ಲಿ ಸಾಕಷ್ಟು ಸಮಸ್ಯೆ ಉಂಟಾಗಿರುವುದಾಗಿ ಅಲ್ಲಿನ ಜನರು ಹೇಳಿಕೊಂಡಿದ್ದಾರೆ. ಇದರ ಬಗ್ಗೆ ರಾಜ್ಯ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಹೇಳಿದರು.
ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿ ಎಲ್ಲರೂ ಸಹಬಾಳ್ವೆಯಿಂದ ಬದುಕಬೇಕೆಂಬ ಬಕ್ರೀದ್ ಹಬ್ಬದ ಶುಭಾಷಯವನ್ನು ಇದೇ ಸಂದರ್ಭದಲ್ಲಿ ಮುಸ್ಲಿಂ ಬಾಂಧವರಿಗೆ ಸಿದ್ದರಾಮಯ್ಯ ಕೋರಿದರು.