ಬೆಂಗಳೂರು: ಕೊಡಗು ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡುವ ನೆಪದಲ್ಲಿ ಯಶೋಮಾರ್ಗ ಫೌಂಡೇಶನ್ ಹೆಸರಲ್ಲಿ ಹಣ ಸಂಗ್ರಹಿಸದಂತೆ ರಾಕಿಂಗ್ ಸ್ಟಾರ್ ಯಶ್ ಸಾರ್ವಜನಿಕರಲ್ಲಿ ಮತ್ತು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.ಕೊಡಗು ಪ್ರವಾಹ ಸಂತ್ರಸ್ತರಿಗೆ ನೆರವಾಗುವ ನೆಪದಲ್ಲಿ ಯಶೋಮಾರ್ಗ ಫೌಂಡೇಶನ್ ಹೆಸರಲ್ಲಿ ದೇಣಿಗೆ ಸಂಗ್ರಹ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಅದರ ಉದ್ದೇಶ ಒಳ್ಳೆಯದೇ ಆದರೂ ಕೂಡ ಯಶೋಮಾರ್ಗ ಹೆಸರನ್ನ ತರಬೇಡಿ. ಸ್ವಂತ ಸಂಪಾದನೆಯ ಹಣದಲ್ಲಿ ಕೈಲಾದ ಮಟ್ಟಿಗೆ ಸಮಾಜ ಸೇವೆ ಮಾಡುತ್ತಿದ್ದೇನೆ. ಇದಕ್ಕಾಗಿ ಜನರಿಂದ ಯಾವುದೇ ದೇಣಿಗೆ ಸ್ವೀಕರಿಸುತ್ತಿಲ್ಲ ಎಂದು ತಮ್ಮ ಫೇಸ್ ಬುಕ್ ಪುಟದಲ್ಲಿ ನಿನ್ನೆ ಯಶ್ ಸ್ಪಷ್ಟನೆ ನೀಡಿದ್ದಾರೆ.ಸಾರ್ವಜನಿಕರ ನೆರವು ಯಶೋಮಾರ್ಗಕ್ಕೆ ಅವಶ್ಯವೆನಿಸುವ ಸಂದರ್ಭದಲ್ಲಿ ನಾನೇ ಖುದ್ದು ನಿಮ್ಮ ಮುಂದೆ ಬರುತ್ತೇನೆ. ಸದ್ಯಕ್ಕೆ ಯಶೋಮಾರ್ಗದ ಹೆಸರಿನಲ್ಲಿ ದೇಣಿಗೆ ಕೇಳಲು ಬಂದವರಿಗೆ ದೇಣಿಗೆ ನೀಡಬೇಡಿ ಎಂದು ಹೇಳಿದ್ದಾರೆ.
August 4, 2018VDಮನರಂಜನೆComments Off on ಕೆಜಿಎಫ್ ನಲ್ಲಿ ರಾಕಿಂಗ್ ಸ್ಟಾರ್ ಜೊತೆ ಬೆಳ್ಳಿ ಪರದೆ ಹಂಚಿಕೊಳ್ಳುತ್ತಿರುವ ಬೆಡಗಿ ಯಾರು?
Seen By: 61 ಬೆಂಗಳೂರು: ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ ಸಿನಿಮಾದ ಅಂತಿಮ ಹಾಡೊಂದನ್ನು ಮುಂದಿನ ದಿನಗಳಲ್ಲಿ ಚಿತ್ರೀಕರಿಸಲಾಗುತ್ತದೆ, ರೆಟ್ರೋ ಕಾಲದ ಹಾಡಿಗೆ ಯಶ್ ಗೆಯಾರು ನಾಯಕಿಯಾಗಲಿದ್ದಾರೆ [more]