
ಹುಬ್ಬಳ್ಳಿ-: ಕ್ಷುಲ್ಲಕ ಕಾರಣಕ್ಕಾಗಿ ನಡೆದ ಗಲಾಟೆಯಲ್ಲಿ ಸ್ನೇಹಿತನಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿದ ಘಟನೆ, ಹುಬ್ಬಳ್ಳಿಯ ಇಂದಿರಾ ಗಾಜಿನ ಮನೆ ಬಳಿ ಇಂದು ಸಂಜೆ ನಡೆದಿದೆ. ವಾಶೀಮ್ ಎಂಬಾತನೇ ಚಾಕು ಇರಿತಕ್ಕೊಳಗಾದ ಯುವಕನಾಗಿದ್ದಾನೆ. ಕ್ಷುಲ್ಲಕ ಕಾರಣಕ್ಕಾಗಿ ಪ್ರಾರಂಭವಾದ ಸ್ನೇಹಿತರ ನಡುವಿನ ಜಗಳ, ವಿಕೋಪಕ್ಕೆ ತಿರುಗಿದೆ. ಈ ವೇಳೆ ದಾವುದ್ ಹಾಗೂ ಆತನೊಂದಿಗೆ ನಾಲ್ಕುಜನ ಸೇರಿಕೊಂಡು ವಾಸಿಮ್ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ವಾಶೀಮ್ ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಾಲಗಿದ್ದು, ಹಲ್ಲೆ ನಡೆಸಿದ ಆರೋಪಿಗಳನ್ನು ವಶಕ್ಕೆ ಪಡೆದ ಉಪನಗರ ಪೊಲೀಸರು ವಿಚಾರಣೆ ನಡೆಸಿದ್ದಾರೆ.