ಮಡಿಕೇರಿ:ಆ-24: ಜಲಪ್ರಳಯಕ್ಕೀಡಾದ ಕೊಡಗು ಜಿಲ್ಲೆಗೆ ಭೇಟಿ ನೀಡಿದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಕೊಡಗು ಪುನರ್ ನಿರ್ಮಾಣಕ್ಕಾಗಿ ಅಗತ್ಯವಾದ ಎಲ್ಲಾ ರೀತಿಯ ನೆರವನ್ನು ಭಾರತೀಯ ಸೇನೆ ನೀಡಲಿದೆ ಎಂದು ಭರವಸೆ ನೀಡಿದ್ದಾರೆ.
ಕೊಡಗಿನ ನಿರಾಶ್ರಿತರ ಕೇಂದ್ರಕ್ಕೆ ಭೇಟ್ ನೀಡಿ ಸಂತ್ರಸ್ತರ ಅಳಲನ್ನು ಆಲಿಸಿದದ ಸಚಿವರು ಕೊಡಗನ್ನು ಪುನರ್ ಸ್ಥಾಪಿಸಲು ಸೇನೆ ಎಲ್ಲಾ ರೀತಿಯ ನೆರವು ನೀಡಲಿದೆ ಎಂದರು. ಏರ್ ಫೋರ್ಸ್ ಕೂಡ ತನ್ನ ಸಹಾಯ ಮಾಡಲಿದೆ’ ಎಂದು ಸಚಿವೆ ಹೇಳಿಕೆ ನೀಡಿದ್ದಾರೆ.
ರಸ್ತೆಗಳು, ಮನೆಗಳು, ಕಟ್ಟಡಗಳು, ನೀರು ಮತ್ತು ವಿದ್ಯುತ್ ಸಂಪರ್ಕಗಳನ್ನು ಪುನಃಸ್ಥಾಪಿಸುವ ಸಲುವಾಗಿ ನಾನು ಇಲ್ಲಿಗೆ ಬಂದಿದ್ದು, ಅದಕ್ಕೆ ಅಗತ್ಯವಾದ ಎಲ್ಲಾ ರೀತಿಯ ನೆರವನ್ನು ಭಾರತೀಯ ಸೇನೆ ನೀಡಲಿದೆ ಎಂದರು.