ಏಷ್ಯನ್ ಗೇಮ್ಸ್ 2018: ಮಹಿಳಾ ಕಬಡ್ಡಿಯಲ್ಲಿ ಭಾರತಕ್ಕೆ ಬೆಳ್ಳಿ

ಜಕಾರ್ತಾ: ಇಂಡೋನೇಷಿಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಹದಿನೆಂಟನೇ ಆವೃತ್ತಿಯ ಆರನೇ ದಿನ ಸಹ ಭಾರತ ವಿವಿಧ ವಿಭಾಗಗಳಲ್ಲಿ ಉತ್ತಮ ಸಾಧನೆ ತೋರಿಸಿದ್ದಲ್ಲದೆ ಪದಕ ಬೇಟೆಯನ್ನು ಮುಂದುವರಿಸಿದೆ. ಇದರ ನಡುವೆ ಭಾರತ ಮಹಿಳಾ ಕಬಡ್ಡಿ ತಂಡ ಫೈನಲ್ಸ್ ನಲ್ಲಿ ಸೋತು ಬೆಳ್ಳಿ ಪದಕಕ್ಕೆ ಕೊರಳೊಡ್ಡಿದೆ.
ಇರಾನ್ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ ಮಹಿಳೆಯರು 27-24 ಅಂತರದ ಸೋಲನುಭವಿಸಿದ್ದಾರೆ.
ಈ ಮೂಲಕ ಏಷ್ಯನ್ ಗೇಮ್ಸ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ ಪುರುಷರ ಅಥವಾ ಮಹಿಳಾ ಕಬಡ್ಡಿಯಲ್ಲಿ ಚಿನ್ನದ ಪದಕ ಗೆಲ್ಲಲು ವಿಫಲವಾಗಿದೆ.
ಪ್ರಸಕ್ತ ಕ್ರೀಡಾಕೂಟದಲ್ಲಿ ಭಾರತ ಇದುವರೆಗೆ 6 ಚಿನ್ನ, 5 ಬೆಳ್ಳಿ, 13 ಕಂಚಿನ ಪದಕಗಳನ್ನು ಗಳಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ