ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬವಾದ ಈ ದಿನ ಕನ್ನಡದಲ್ಲಿ 3 ಪ್ರಮುಖ ಸಿನಿಮಾಗಳು ಬಿಡುಗಡೆಯಾಗಿವೆ.ಕಿರಿಕ್ ಪಾರ್ಟಿ ಚಿತ್ರ ನಿರ್ದೇಶಕ ರಿಷಬ್ ಶೆಟ್ಟಿ ಅವರ `ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಎಂಬ ಸಿನಿಮಾವನ್ನು ಕನ್ನಡ ಪ್ರೇಕ್ಷಕರ ಮುಂದಿಟ್ಟಿದ್ದಾರೆ. ಚಿತ್ರದಲ್ಲಿ ಹಿರಿಯ ನಟ ಅನಂತ್ ನಾಗ್ ಸೇರಿದಂತೆ ಹಲವು ಮಕ್ಕಳು ಬಣ್ಣ ಹಚ್ಚಿದ್ದಾರೆ. ಗಡಿನಾಡ ಸರ್ಕಾರಿ ಕನ್ನಡ ಶಾಲೆಗಳ ಸ್ಥಿತಿ-ಗತಿಗಳ ಜೊತೆ ಆ ಮಕ್ಕಳ ಬದುಕು ಬವಣೆ ಹೇಳಲು ಚಿತ್ರತಂಡ ಸಜ್ಜಾಗಿದೆ. ಬೆಂಗಳೂರಿನ ಸಂತೋಷ್ ಚಿತ್ರಮಂದಿರ ಸೇರಿದಂತೆ ರಾಜ್ಯಾದ್ಯಂತ ಬಿಡುಗಡೆಯಾಗಿದೆ.`ರಾಮ ರಾಮಾ ರೇ’ ಖ್ಯಾತಿಯ ಸತ್ಯಪ್ರಕಾಶ್ ಸಾರಥ್ಯದಲ್ಲಿ `ಒಂದಲ್ಲ ಎರಡಲ್ಲಾ’ ಸಿನಿಮಾ ಬಿಡುಗಡೆಯಾಗುತ್ತಿದೆ. ಹೆಬ್ಬುಲಿ ನಿರ್ಮಾಪಕರು ಈ ಸಿನಿಮಾಗೆ ಬಂಡವಾಳ ಹಾಕಿದ್ದು ಮಾಸ್ಟರ್ ರೋಹಿತ್, ಸಾಯಿಕೃಷ್ಣ ಕುಡ್ಲ, ಎಂ.ಕೆ ಮೃ, ಆನಂದ್ ನಿನಾಸಂ ಸೇರಿದಂತೆ ಹಲವರು ಅಭಿನಯಿಸಿದ್ದಾರೆ. ಮನಂಜನೆಯ ಜೊತೆ ಭಾವನಾತ್ಮಕ ವಿಚಾರಗಳನ್ನು ಹೇಳಲು ಚಿತ್ರತಂಡ ಸಜ್ಜಾಗಿದೆ.
ದರ್ಶನ್ ತೂಗದೀಪ್ ಸಹೋದರ ದಿನಕರ್ ತೂಗುದೀಪ ಸಾರಥ್ಯದಲ್ಲಿ ಹಲವು ಸಮಯಗಳ ನಂತರ ಲೈಫ್ ಜೊತೆ ಒಂದು ಸೆಲ್ಫಿ ಸಿನಿಮಾ ಬಿಡುಗಡೆಯಾಗಿದೆ. ದಿನಕರ್ ಮಡದಿ ಮಾನಸ ಚಿತ್ರಕ್ಕೆ ಕಥೆ ಬರೆದರೆ ಪ್ರಜ್ವಲ್ ದೇವರಾಜ್, ನೆನಪಿರಲಿ ಪ್ರೇಮ್, ಹರಿಪ್ರಿಯಾ ಮುಖ್ಯ ಪಾತ್ರವಹಿಸಿದ್ದಾರೆ. ವಿ. ಹರಿಕೃಷ್ಣ ಅವರ ಸಂಗೀತವಿದೆ.