ಮೆಸೇಜಿಂಗ್‌ ಆ್ಯಪ್‌ಗಳ ನಿಷೇಧ ಇಲ್ಲ: ಕೇಂದ್ರ

ಹೊಸದಿಲ್ಲಿ: ಸಾಮಾಜಿಕ ಜಾಲತಾಣಗಳು ಹಾಗೂ ಮೆಸೇಜಿಂಗ್‌ ಆ್ಯಪ್‌ಗಳ ಮೇಲೆ ನಿಷೇಧ ಹೇರುವ ಪ್ರಸ್ತಾಪ ಸರಕಾರಕ್ಕಿಲ್ಲ. ಆದರೆ ಇವುಗಳ ದುರ್ಬಳಕೆಯನ್ನು ತಡೆಗಟ್ಟಲು ಕೆಲವು ತಾಂತ್ರಿಕ ಉಪಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ದೂರಸಂಪರ್ಕ ಇಲಾಖೆಯ ಕಾರ್ಯದರ್ಶಿ ಅರುಣ ಸುಂದರರಾಜನ್‌ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳ ಮೂಲಕ ವದಂತಿಗಳನ್ನು ಹರಡುವುದು, ಅವಹೇಳನಕರ ಹಾಗೂ ಸಮಾಜದ ಶಾಂತಿ ಭಂಗಕ್ಕೆ ಆಸ್ಪದವಾಗುವಂಥ ಪ್ರಚೋದನಾತ್ಮಕ ಪೋಸ್ಟ್‌ ಇತ್ಯಾದಿಗಳು ಪ್ರಸಾರವಾಗದಂತೆ ತಡೆಯಲು ಕೆಲವು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಈ ನಿಟ್ಟಿನಲ್ಲಿ ಸೆಪ್ಟೆಂಬರ್‌ ತಿಂಗಳಿನಲ್ಲಿ ಮಾರ್ಗದರ್ಶಿ ರೂಪಿಸಲಾಗುವುದು ಎಂದು ಕೇಂದ್ರ ಸರಕಾರ ತಿಳಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ