ವರಮಹಾ ಲಕ್ಷ್ಮಿ ಹಬ್ಬ: ಗೂರವನಹಳ್ಳಿ ಶ್ರೀ ಮಹಾಲಕ್ಷ್ಮಿ ದೇವಿಗೆ ವಿಶೇಷ ಪೂಜೆ

ತುಮಕೂರು: ನಾಡಿನಾದ್ಯಂತ ಶ್ರದ್ಧಾ ಭಕ್ತಿಗಳಿಂದ ಆಚರಿಸಲ್ಪಡುತ್ತಿರುವ ವರಮಹಾ ಲಕ್ಷ್ಮಿ ಹಬ್ಬದ ಅಂಗವಾಗಿ ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀ ಗೂರವನಹಳ್ಳಿ ಶ್ರೀ ಮಹಾಲಕ್ಷ್ಮಿ ದೇವಿಗೆ ವಿಶೇಷ ಪೂಜೆ, ಹೋಮ , ಹೂವಿನ ಅಲಂಕಾರ, ಅಭಿಷೇಕ , ಅಷ್ಟೋತ್ತರ, ಸಹಸ್ರನಾಮ ವಿವಿಧ ಪೂಜಾ ಕೈಂಕರ್ಯಗಳು ನಡೆದವು.

ನಾಡಿನ ವಿವಿದೆಡೆಗಳಿಂದ ಆಗಮಿಸಿದ ಭಕ್ತಾದಿಗಳು ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದು ತಮ್ಮ ಭಕ್ತಿ ಸಮರ್ಪಿಸಿದರು

ದೇವಿ ದರ್ಶನಕ್ಕೆ ಆಗಮಿಸಿದ ಹೆಣ್ಣುಮಕ್ಕಳು ಸೀರೆ, ಬಳೆ, ಮಡ್ಲಕ್ಕಿ,ಹೂಗಳು ದೇವಿಗೆ ಸಮರ್ಪಿಸಿ ತಮ್ಮ ಇಷ್ಟಾರ್ಥಗಳನ್ನು ಇಡೆರಿಸುವಂತೆ ಪ್ರಾರ್ಥನೆ ಸಲ್ಲಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ