ಬೆಂಗಳೂರು,ಆ.25- ಅನ್ನಭಾಗ್ಯ ಅಕ್ಕಿ ಪ್ರಮಾಣ ಕಡಿತ ಮಾಡಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದ್ದು, ಅಕ್ಟೋಬರ್‍ನಿಂದ ಜಾರಿಗೊಳಿಸುವ ಸಾಧ್ಯತೆ ಇದೆ.
ಪ್ರತಿ ವ್ಯಕ್ತಿಗೆ ನೀಡುವ ಅಕ್ಕಿ ಪ್ರಮಾಣವನ್ನು 7 ಕೆಜಿಯಿಂದ 5 ಕೆಜಿಗೆ ಇಳಿಸುವಸಾಧ್ಯತೆ ಇದೆ. ಇದರಿಂದ ಸರ್ಕಾರಕ್ಕೆ 6 ತಿಂಗಳಲ್ಲಿ 765 ಕೋಟಿ ರೂ. ಉಳಿತಾಯವಾಗಲಿದ್ದು ರೈತರ ಸಾಲ ಮನ್ನಾ ಮಾಡುವ ಉದ್ದೇಶ ಹೊಂದಲಾಗಿದೆ.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ 3236 ಕೋಟಿ ಹಣ ಒದಗಿಸಿದ್ದರು. 2 ಕೆಜಿ ಅಕ್ಕಿ ಕಡಿತ ಮಾಡುವುದರಿಂದ 2499.31 ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ.