ಹುಬ್ಬಳ್ಳಿ:- ನಾಲ್ಕು ವರ್ಷಗಳಿಂದ ಪೊಲೀಸರಿಗೆ ಚೆಳ್ಳೆ ಹಣ್ಣು ತಿನ್ನಿಸಿ ಪರಾರಿಯಾಗಿದ್ದ ಅಪರಾಧಿಯನ್ನು ಬಂಧಿಸುವಲ್ಲಿ, ಹುಬ್ಬಳ್ಳಿಯ ರೈಲ್ವೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಹುಬ್ಬಳ್ಳಿ ನಿವಾಸಿ ಕಾಶಿನಾಥ ಬಂಡಾರಿ ಎಂಬಾತನೇ ಬಂಧಿತ ಆರೋಪಿ. 2013 ರಲ್ಲಿ ನಡೆದ ರೈಲ್ವೆ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬನಿಗೆ ಚಾಕುವಿನಿಂದ ಹಲ್ಲೆ ಮಾಡಿ ಹಣ ಸುಲಿಗೆ ಮಾಡಿದ್ದರು. ಈ ಪ್ರರಣವನ್ನು ಆಲಿಸಿದ ಹುಬ್ಬಳ್ಳಿಯ ಒಂದನೇ ಜೆಎಂ ಎಫ್ ಸಿ ನ್ಯಾಯಾಲಯ ಒಂದು ವರ್ಷ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿತ್ತು. ಕೋರ್ಟ್ ಆದೇಶ ಬರುತ್ತಿದ್ದಂತೆ ಕಾಶಿನಾಥ ಏಸ್ಕೇಪ್ ಆಗಿದ್ದ. ಅಂದಿನಿಂದ ಕಳೆದ ನಾಲ್ಕು ವರ್ಷಗಳಿಂದ ವೇಷ ಬದಲಿಸಿಕೊಂಡು ಹೊರ ರಾಜ್ಯಗಳಲ್ಲಿ ಸುತ್ತಾಡುತ್ತಿದ್ದ ಎನ್ನಲಾಗುತ್ತಿದೆ. ಅಂದಿನಿಂದ ಈ ವರೆಗೆ ಪೊಲೀಸರಿಗೆ ಯಾಮಾರಿಸಿ ತಲೆಮರಿಸಿಕೊಂಡಿದ್ದ, ಕಾಶಿನಾಥ್ ಹುಬ್ಬಳ್ಳಿ ರೈಲ್ವೆ ಪೊಲೀಸರು ಬೀಸಿದ ಬಲೆಗೆ ಬಿದಿದ್ದಾನೆ. ಖಚಿತ ಮಾಹಿತಿ ಮೇಲೆ ದಾಳಿ ನಡೆಸಿದ ಪೊಲೀಸರು ಇಂದು ನೇಕಾರ ನಗರದಲ್ಲಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.