ಸಂವಿಧಾನದ ತಿರುಳನ್ನು ಅರ್ಥ ಮಾಡಿಕೊಂಡರೆ ಬದುಕನ್ನು ಕಟ್ಟಿಕೊಳ್ಳಬಹುದು ಎಂದು ನವದೆಹಲಿಯ ಜೆಎನ್‍ಯು ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಪೀಠದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮನೆ ಅಭಿಪ್ರಾಯ

 

ಬೆಂಗಳೂರು, ಆ.25- ಸಂವಿಧಾನದ ತಿರುಳನ್ನು ಅರ್ಥ ಮಾಡಿಕೊಂಡರೆ ಬದುಕನ್ನು ಕಟ್ಟಿಕೊಳ್ಳಬಹುದು ಎಂದು ನವದೆಹಲಿಯ ಜೆಎನ್‍ಯು ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಪೀಠದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮನೆ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ಸೆಂಟ್ರಲ್ ಕಾಲೇಜಿನಲ್ಲಿ ಸಹಯಾನ-ಸಮುದಾಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ಓದು ಅಭಿಯಾನ ಉದ್ಘಾಟನೆ, ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ನ್ಯಾಯದ ಪರಿಕಲ್ಪನೆಯನ್ನು ಸಂವಿಧಾನಕೊಟ್ಟಿದೆ. ಸಂವಿಧಾನ ರಚನೆಗೂ ಮುನ್ನ ಆಯಾ ಧರ್ಮದ ಭಕ್ತರನ್ನಾಗಿ ಗುರುತಿಸಲಾಗುತ್ತಿತ್ತು. ಸಂವಿಧಾನ ರಚನೆಯಾದ ಮೇಲೆ ಭಾರತೀಯರನ್ನು ಪೌರರನ್ನಾಗಿ ಗುರುತಿಸಲಾಯಿತು. ಎಲ್ಲ ಭಾಷೆಗಳಿಗೂ ಸಮಾನತೆಯ ಗೌರವವನ್ನು ತಂದುಕೊಟ್ಟಿದೆ ಎಂದು ಪ್ರತಿಪಾದಿಸಿದರು.

ಸಂವಿಧಾನ ಮೂಲ ಕನಾನೂನಾಗಿದ್ದು, ಜನರಿಗೆ ಮೂಲಭೂತ ಹಕ್ಕುಗಳನ್ನು ಕೂಡ ನೀಡಿದೆ. ಸಮಾನತೆ, ಸಹಬಾಳ್ವೆ ಮೂಲಕ ರಾಷ್ಟ್ರದ ಪ್ರಗತಿಗೆ ಸಂವಿಧಾನ ಅವಕಾಶವನ್ನು ಕಲ್ಪಿಸಿಕೊಟ್ಟಿದೆ ಎಂದು ಅವರು ಅಭಿಪ್ರಾಯಪಟ್ಟರು.
ಸಮಾರಂಭದಲ್ಲಿ ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಉಪ ಕುಲಪತಿ ಪೆÇ್ರ.ವಿ.ಜಾಫೆಟ್, ನಿವೃತ್ತ ನ್ಯಾಯಾಧೀಶರಾದ ಎಚ್.ಎನ್.ನಾಗಮೋಹನ್‍ದಾಸ್ ಸೇರಿದಂತೆ ಮತ್ತಿತರರ ಗಣ್ಯರು ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ