
ನವದೆಹಲಿ: ಇಂಡೋನೇಷ್ಯಾದ ಜಕಾರ್ತದಲ್ಲಿ ನಡೆದ ಏಷ್ಯನ್ ಗೇಮ್ಸ್ ನ ಕುಸ್ತಿಯಲ್ಲಿ ಭಾರತಕ್ಕೆ ಐತಿಹಾಸಿಕ ಚಿನ್ನ ತಂದಕೊಟ್ಟ ಸಂತಸದಲ್ಲಿರುವ ಮಹಿಳಾ ಕುಸ್ತಿಪಟು ವಿನೇಶ್ ಪೋಗಾಟ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ಕುಸ್ತಿಪಟು ಸೋಮ್ ವೀರ್ ರಾಠಿ ಅವರೊಂದಿಗೆ ವಿನೇಸ್ ಪೋಗಾಟ್ ನಿಶ್ಚಿತಾರ್ಥ ಮಾಡಿಕೊಂಡಿದ್ದು ಈ ವಿಷಯವನ್ನು ಸಾಮಾಜಿಕ ತಾಣಗಳಲ್ಲಿ ಬಹಿರಂಗಪಡಿಸಿದ್ದಾರೆ. ಇನ್ನು ನಿಶ್ಚಿತಾರ್ಥ ವಿಷಯವನ್ನು ವಿನೇಶ್ ಸಂಬಂಧಿಯೊಬ್ಬರು ಖಚಿತಪಡಿಸಿದ್ದಾರೆ.