ರಕ್ಷಾ ಬಂಧನ: ದೇಶದ ಜನತೆಗೆ ಗಣ್ಯರ ಶುಭಾಷಯ

ನವದೆಹಲಿ: ರಕ್ಷಾ ಬಂಧನ ಹಬ್ಬದ ಅಂಗವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್‌, ಪ್ರಧಾನಿ ನರೇಂದ್ರ ಮೋದಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ದೇಶದ ಜನತೆಗೆ ಶುಭ ಕೋರಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ರಾಷ್ಟ್ರಪತಿ ಕೋವಿಂದ್‌ ಎಲ್ಲರಿಗೂ ರಕ್ಷಾ ಬಂಧನದ ಶುಭಾಶಯಗಳು. ಈ ಉತ್ಸವವು ಸೋದರತ್ವವನ್ನು ಬಲಪಡಿಸುತ್ತದೆ. ಹೆಣ್ಣು ಮಕ್ಕಳು, ಮಹಿಳೆಯ ಭದ್ರತೆ ಹಾಗೂ ಘನತೆಯನ್ನು ಹೆಚ್ಚಿಸುವುದರ ಜತೆಗೆ, ಸಮಾಜದಲ್ಲಿ ಗೌರವದಿಂದ ಜೀವಿಸಲು ನಮಗೆ ಸ್ಫೂರ್ತಿ ನೀಡುತ್ತದೆ’ ಎಂದು ತಿಳಿಸಿದ್ದಾರೆ.

ರಕ್ಷಾ ಬಂಧನದ ಶುಭಾಶಯಗಳು ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮಾಡಿದ್ದಾರೆ. ಶ್ರಾವಣದ ಹುಣ್ಣಿಮೆ ದಿನ ಆಚರಿಸುವ ರಕ್ಷಾ ಬಂಧನ ಅಥವಾ ರಾಖಿ ಹಬ್ಬವು ಆತ್ಮೀಯತೆ, ಅಂತಃಕರಣವನ್ನು ಮತ್ತಷ್ಟು ಗಟ್ಟಿಗೊಳಿಸುವ ಸಂಭ್ರಮದ ಹಬ್ಬವಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ದೇಶಾದ್ಯಂತ ರಕ್ಷಾ ಬಂಧನ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಶಾಲಾ ಮಕ್ಕಳು ರಾಖಿ ಕಟ್ಟಿ ಸಂಭ್ರವನ್ನು ಆಚರಿಸಿದರು.

ಶಾಲಾ ಮಕ್ಕಳು, ಅಂಗವಿಕಲರು ಪ್ರಧಾನಿ ಮೋದಿ ಹಾಗೂ ಕೋವಿಂದ್ ಅವರಿಗೆ ರಾಖಿ ಕಟ್ಟಿ ಸಂಭ್ರಮವನ್ನು ಆಚರಿಸಿದರು.

ಗುಜರಾತ್ ರಾಜ್ಯ ಮಹಿಳಾ ಸಂಸದರು, ಉತ್ತರಪ್ರದೇಶ ಮತ್ತು ವಾರಣಾಸಿಯ ವಿಧವೆಯರೂ ಕೂಡ ಪ್ರಧಾನಿ ಮೋದಿಯವರಿಗೆ ರಾಖಿ ಕಟ್ಟಿ ಸಂತಸವನ್ನು ಹಂಚಿಕೊಂಡರು.

ಇನ್ನು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರಿಗೆ ರಾಖಿ ಕಟ್ಟಿ ಸಂಸತವನ್ನು ಹಂಚಿಕೊಂಡರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ