ಗೃಹೇತರ ಬಳಕೆ ಪರಿವರ್ತನೆ ವಿಳಂಬ ಮತ್ತಿತರ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ನೀರಿನ ಅದಾಲತನ್ನು ನಾಳೆ

 

ಬೆಂಗಳೂರು, ಆ.26- ಬೆಂಗಳೂರು ಜಲಮಂಡಲಿಯ (ದಕ್ಷಿಣ-4) (ವಾಯುವ್ಯ-1) ಉಪವಿಭಾಗಗಳಲ್ಲಿ ನೀರಿನ ಬಿಲ್ಲು, ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸುವಲ್ಲಿನ ವಿಳಂಬ, ಗೃಹ ಬಳಕೆಯಿಂದ ಗೃಹೇತರ ಬಳಕೆ ಪರಿವರ್ತನೆ ವಿಳಂಬ ಮತ್ತಿತರ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ನೀರಿನ ಅದಾಲತನ್ನು ನಾಳೆ ಬೆಳಗ್ಗೆ 9.30 ರಿಂದ 11 ಗಂಟೆಯವರೆಗೆ ನಡೆಸಲಾಗುತ್ತದೆ.

(ದಕ್ಷಿಣ-4) ಉಪವಿಭಾಗ ವ್ಯಾಪ್ತಿಗೆ ಬರುವ ಹೆಚ್.ಎಸ್.ಆರ್ ಲೇಔಟ್, ಕೋಡಿಚಿಕ್ಕನಹಳ್ಳಿ, ಸೇವಾಠಾಣೆಗಳಿಗೆ ಸಂಬಂಧಿಸಿದ ವಿವಾದಗಳನ್ನು ಬಿ.ಟಿ.ಎಂ 2ನೇ ಹಂತ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿಯಲ್ಲಿ ಪರಿಶೀಲಿಸಿ ಬಗೆಹರಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: ಕಾರ್ಯನಿರ್ವಾಹಕ ಅಭಿಯಂತರರು (ದಕ್ಷಿಣ) 22945143. ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು (ದಕ್ಷಿಣ-4) ಉಪವಿಭಾಗ-22945392.

(ವಾಯುವ್ಯ-1) ಉಪವಿಭಾಗ ವ್ಯಾಪ್ತಿಗೆ ಬರುವ ಕೇತಮಾರನಹಳ್ಳಿ, ಮಹಾಲಕ್ಷ್ಮೀ ಲೇಔಟ್, ರಾಜಾಜಿನಗರ 1 2, ನಂದಿನಿ ಲೇಔಟ್-1, ಸೇವಾಠಾಣೆಗಳಿಗೆ ಸಂಬಂಧಿಸಿದ ವಿವಾದಗಳನ್ನು ರಾಜಾಜಿನಗರ 1ನೇ ಬ್ಲಾಕ್, ಕೇತಮಾರನ ಹಳ್ಳಿ, ವಿದ್ಯಾವರ್ಧಕ ಶಾಲೆ ಹಿಂಭಾಗ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿಯಲ್ಲಿ ಪರಿಶೀಲಿಸಿ ಬಗೆಹರಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: ಕಾರ್ಯನಿರ್ವಾಹಕ ಅಭಿಯಂತರರು (ವಾಯುವ್ಯ-1) 23491123 ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು (ವಾಯುವ್ಯ-1) ಉಪವಿಭಾಗ-22945176.
ಕುಂದು ಕೊರತೆಗಳಿಗೆ ಸಂಬಂಧಿಸಿದಂತೆ ಮಂಡಲಿಯ 24/7 ದೂರುನಿರ್ವಹಣಾ ಕೇಂದ್ರದ ದೂರವಾಣಿ ಸಂಖ್ಯೆ-22238888, ಸಹಾಯವಾಣಿ 1916 ಹಾಗೂ ವಾಟ್ಸ್‍ಆಪ್ ಸಂಖ್ಯೆ-8762228888ಗೆ ಸಂಪರ್ಕಿಸಬಹುದಾಗಿದೆ.
ಸಾರ್ವಜನಿಕರು ಮೇಲಿನ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಈ ಅದಾಲತ್ ಸೌಲಭ್ಯ ಬಳಸಿಕೊಳ್ಳ ಬಹುದು ಎಂದು ಸಾರ್ವಜನಿಕ ಸಂಪರ್ಕಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ