ಸಂಭ್ರಮದ ವೀರಭದ್ರೇಶ್ವರ ರಥೋತ್ಸವ

ರಾಯಚೂರು: ಮಸ್ಕಿ ತಾಲ್ಲೂಕಿನ ನಾಗರಬೆಂಚಿ ಗ್ರಾಮದ ವೀರಭದ್ರೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸ ವಿಜೃಂಭಣೆಯಿಂದ ಜರುಗಿತು. ಗ್ರಾಮದ ಸಂಸ್ಥಾನ ಹಿರೇಮಠಾಧ್ಯಕ್ಷ ಡಾ.ಮಹಾಂತೇಶ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಜಾತ್ರಾ ಮಹೋತ್ಸವದಲ್ಲಿ ಸ್ಥಳೀಯರು ಹಾಗೂ ಸುತ್ತಲಿನ ಗ್ರಾಮಗಳ ಸಾವಿರಾರು ಭಕ್ತರು ಪಾಲ್ಗೊಂಡು ಸಂಭ್ರಮಿಸಿದರು. ಗ್ರಮಾದ ರಾಜಬೀದಿಯಲ್ಲಿ ರಥವನ್ನೆಳೆದ ಭಕ್ತರು ವೀರಭದ್ರೇಶ್ವರ ದೇವರ ಕೃಪೆಗೆ ಪಾತ್ರರಾದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ