![blosht](http://kannada.vartamitra.com/wp-content/uploads/2018/08/blosht-678x380.jpg)
ಬೆಂಗಳೂರು, ಆ.27- ಬಿಡದಿ ಪೆÇಲೀಸ್ ವಸತಿ ಗೃಹದಲ್ಲಿ ಅಡುಗೆ ಅನಿಲ ಸ್ಫೋಟಗೊಂಡ ಘಟನೆ ಕಳೆದ ರಾತ್ರಿ ನಡೆದಿದೆ.
ಬಿಡದಿ ಠಾಣೆ ಎಎಸ್ಐ ರಮೇಶ್ ಅವರ ಮನೆಯಲ್ಲಿ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡಿದ್ದು, ಕುಟುಂಬದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಫೋಟಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಈ ಬಗ್ಗೆ ಬಿಡದಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.