ಬೆಂಗಳೂರು,ಆ.27- ಯಾವುದೇ ಕಾರಣಕ್ಕೂ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಸಚಿವ ಚಲುವರಾಯಸ್ವಾಮಿ ಇಂದಿಲ್ಲಿ ತಿಳಿಸಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಸಿದ್ದರಾಮಯ್ಯ ಒಂಟಿಯಲ್ಲ. ಯಾರಾದರೂ ಒಂಟಿಯಾಗಿದ್ದಾರೆ ಅಂದುಕೊಂಡರೆ ಅವರಷ್ಟು ದಡ್ಡರು ಯಾರೂ ಇಲ್ಲ. ಶಾಸಕರು, ಮಾಜಿ ಶಾಸಕರು, ಸಂಸದರು ಸೇರಿದಂತೆ ಎಲ್ಲರೂ ಅವರ ಜೊತೆ ಇದ್ದಾರೆ ಎಂದು ಹೇಳಿದರು.
ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಜೆಡಿಎಸ್ ಕಾರ್ಯಕರ್ತರು ಟಾರ್ಗೆಟ್ ಮಾಡುತ್ತಿರುವುದು ಎಲ್ಲಾ ನಾಯಕರಿಗೂ ಗೊತ್ತಿರುವ ವಿಚಾರ ಎಂದರು.
ಮತ್ತೆ ಸಿದ್ದರಾಮಯ್ಯ ಅವರು ಸಿಎಂ ಆಗುತ್ತೇನೆ ಎಂದು ಹೇಳಿರುವುದು ಬೇರೆ ಅರ್ಥದಲ್ಲಿ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ಸಮ್ಮಿಶ್ರ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಪರಮೇಶ್ವರ್, ಸಚಿವ ಡಿ.ಕೆ.ಶಿವಕುಮಾರ್ ಇದ್ದಾರೆ ಎಂದು ಹೇಳಿದರು.
ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ವಿಚಾರ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು ಎಂದು ಹೇಳಿದರು.
ಮಾಗಡಿ ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ ಮಾತನಾಡಿ, ಕಾಂಗ್ರೆಸ್ನಲ್ಲಿ ನಾವು ಸೋತಿದ್ದೇವೆ. ಅವರು ಗೆದ್ದಿದ್ದಾರೆ. ಮುಂದು ನಾವು ಗೆಲ್ತೀವಿ , ಅವರು ಸೋಲ್ತಾರೆ ಎಂದು ಮಾರ್ಮಿಕವಾಗಿ ನುಡಿದರು.