ನಗರಾದ್ಯಂತ ಫ್ಲೆಕ್ಸ್, ಬ್ಯಾನರ್‍ಗಳನ್ನು ನಿಷೇಧಿಸಬೇಕೆಂದು ಬಿಬಿಎಂಪಿಗೆ ಹೈಕೋರ್ಟ್ ಕಟ್ಟಪ್ಪಣೆ

ಬೆಂಗಳೂರು, ಆ.27-ನಗರಾದ್ಯಂತ ಫ್ಲೆಕ್ಸ್, ಬ್ಯಾನರ್‍ಗಳನ್ನು ನಿಷೇಧಿಸಬೇಕೆಂದು ಬಿಬಿಎಂಪಿಗೆ ಹೈಕೋರ್ಟ್ ಕಟ್ಟಪ್ಪಣೆ ಮಾಡಿದೆ. ಹಲವು ವಿಚಾರಣೆಗಳ ಸಂದರ್ಭದಲ್ಲಿ ಬಿಬಿಎಂಪಿ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ. ನಗರದಾದ್ಯಂತ ಇದ್ದ ಫ್ಲೆಕ್ಸ್-ಬ್ಯಾನರ್‍ಗಳನ್ನು ತೆರವುಗೊಳಿಸಲಾಗಿದೆ. ಈ ನಡುವೆ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿಯೇ ಫ್ಲೆಕ್ಸ್‍ಗಳು ರಾರಾಜಿಸುತ್ತಿವೆ…
ಫ್ಲೆಕ್ಸ್, ಬ್ಯಾನರ್ ನಿಷೇಧಿಸಿರುವ ನಿಯಮಕ್ಕೆ ಬಿಬಿಎಂಪಿಯೇ ಆದ್ಯತೆ ನೀಡುತ್ತಿಲ್ಲ. ಜಾಹೀರಾತು ನಿಷೇಧ ನಿಯಮವನ್ನು ಚುನಾವಣಾ ಆಯೋಗ ಇಲ್ಲಿ ಗಾಳಿಗೆ ತೂರಿದಂತಿದೆ.
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಅವರಿಂದಲೇ ನಿಯಮ ಉಲ್ಲಂಘನೆಯಾಗಿದೆ. ಪಾಲಿಕೆ ಕಚೇರಿ ಗೇಟ್‍ಗೆ ಆಯೋಗದ ಫ್ಲೆಕ್ಸ್ ಅಳವಡಿಸಲಾಗಿದೆ.
ಸ್ಥಳೀಯ ಸಂಸ್ಥೆ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಪರಿಷ್ಕರಿಸಲು ನೀಡಿದ ಸೂಚನೆಯ ಫ್ಲೆಕ್ಸ್‍ನ್ನು ಇಲ್ಲಿ ಅಳವಡಿಸಲಾಗಿದೆ. ಈ ನಿಷೇಧ ಆಯೋಗಕ್ಕೆ ಅನ್ವಯಿಸುವುದಿಲ್ಲವೇ? ಎಂದು ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ