ಬಿಜೆಪಿ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಪ್ರಧಾನಿ ಸಭೆ

ನವದೆಹಲಿ: ಲೋಕಸಭಾ ಚುನಾವಣೆ ಮೇಲೆ ಗಮನವಿಟ್ಟಿರುವ ಪ್ರಧಾನಿ ನರೇಂದ್ರಮೋದಿ ಇಂದು ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದಿದ್ದಿದ್ದಾರೆ.

ಬಿಜೆಪಿ ಕೇಂದ್ರ ಕಛೇರಿಯಲ್ಲಿ ಪ್ರಧಾನಿ ಅಧ್ಯಕ್ಷತೆಯಲ್ಲಿ ಆರಂಭವಾಗಿರುವ ಸಭೆಯಲ್ಲಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಗೃಹ ಸಚಿವ ರಾಜನಾಥ್ ಸಿಂಗ್, ವಿತ್ತ ಸಚಿವ ಅರುಣ್ ಜೇಟ್ಲಿ ಹಾಗೂ ಉತ್ತರ ಪ್ರದೇಶ, ಮಧ್ಯಪ್ರದೇಶ, ರಾಜಸ್ತಾನ ಸೇರಿದಂತೆ ಬಿಜೆಪಿ ಆಡಳಿತವಿರುವ 15 ರಾಜ್ಯಗಳ ಮುಖ್ಯಮಂತ್ರಿಗಳು ಪಾಲ್ಗೊಂಡಿದ್ದಾರೆ.

ಸಭೆಯಲ್ಲಿ ರಾಜ್ಯಗಳಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲಿದ್ದು, ನಿರ್ದೇಶನ ನೀಡಲಾಗುತ್ತಿದೆ. ಮುಂಬರುವ ವಿಧಾನಸಭೆ ಚುನಾವಣೆ ಮತ್ತು ಲೋಕಸಭಾ ಚುನಾವಣೆಯ ಕಾರಣದಿಂದಾಗಿ ಅನುಸರಿಸಬೇಕಾದ ಕಾರ್ಯತಂತ್ರ ಕುರಿತಂತೆ ಚರ್ಚಿಸಲಾಗುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಮಧ್ಯಪ್ರದೇಶ, ರಾಜಸ್ತಾನ, ಚತ್ತೀಸ್ ಗಢ ರಾಜ್ಯಗಳಲ್ಲಿ ಈ ವರ್ಷದ ನಂತರ ವಿಧಾನಸಭಾ ಚುನಾವಣೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳು ಹಾಗೂ ಉತ್ತಮ ಆಡಳಿತದ ಬಗ್ಗೆ ಜನರಿಗೆ ಯಾವ ರೀತಿ ಮನವರಿಕೆ ಮಾಡಿಕೊಡಬೇಕು ಎಂಬ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ