
ಬೆಂಗಳೂರು: ಸ್ಯಾಂಡಲ್ ವುಡ್ ನಟ “ಗೋಲ್ಡನ್ ಸ್ಟಾರ್” ಗಣೇಶ್ ತಂದೆ ವಿಧಿವಶರಾಗಿದ್ದಾರೆ.
ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಸೋಮವಾರ ಸಂಜೆ ರಾಮಕೃಷ್ಣಪ್ಪ (82) ಕೊನೆಯುಸಿರೆಳೆದರು.
ಅನಾರೋಗ್ಯದಿಂದ ಬಳಲುತ್ತಿದ್ದ ರಾಮಕೃಷ್ಣಪ್ಪ ಅವರನ್ನು ಕೆಲ ದಿನಗಳ ಹಿಂದೆ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಮೂಲಗಳು ಹೇಳಿದೆ.
ಗಣೇಶ್ ತಂದೆ-ತಾಯಿಗಳು ನೆಲಮಂಗಲ ಸಮೀಪದ ಅಡಕಿಮಾರನಹಳ್ಳಿಯಲ್ಲಿ ನೆಲೆಸಿದ್ದರು.