‘ಗಿಮ್ಮಿಕ್’ ಶೂಟಿಂಗ್ ಆರಂಭಿಸಿದ ಗೋಲ್ಡನ್ ಸ್ಟಾರ್ ಗಣೇಶ್

ಬೆಂಗಳೂರು: ಪ್ರಶಾಂತ್ ರಾಜ್ ನಿರ್ದೇಶನದ ಆರೇಂಜ್ ಸಿನಿಮಾ ಶೂಟಿಂಗ್ ಬಹುತೇಕ ಪೂರ್ಣಗೊಂಡಿದ್ದು, ಗೋಲ್ಡನ್ ಸ್ಟಾರ್ ಗಣೇಶ್ ಗಿಮ್ಮಿಕ್  ಸಿನಿಮಾ ಶೂಟಿಂಗ್ ನಲ್ಲಿ ಸೋಮವಾರದಿಂದ ಪಾಲ್ಗೊಂಡಿದ್ದಾರೆ.
ಮೊದಲ ಬಾರಿಗೆ ಕಾಮಿಡಿ ಹಾರರ್ ಸಿನಿಮಾದಲ್ಲಿ ಗಣೇಶ್ ನಟಿಸುತ್ತಿದ್ದಾರೆ, ಗಿಮ್ಮಿಕ್ ಸಿನಿಮಾವನ್ನು ನಾಗಣ್ಣ ನಿರ್ದೇಶಿಸುತ್ತಿದ್ದು, ಸದ್ಯ ನಾಗಣ್ಣ ಮುನಿರತ್ನ ಕುರು ಕ್ಷೇತ್ರ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ.
ಗಿಮ್ಮಿಕ್ ಸಿನಿಮಾದಲ್ಲಿ ಗಣೇಶ್ ಗೆ ಜೋಡಿಯಾಗಿ ರೋನಿಕಾ ಸಿಂಗ್ ನಟಿಸುತ್ತಿದ್ದಾರೆ, ಇದೇ ಮೊದಲ ಬಾರಿಗೆ ಕನ್ನಡದಲ್ಲಿ ರೋನಿಕಾ ನಟಿಸುತ್ತಿದ್ದಾರೆ.ಶ್ರೀಲಂಕಾದಲ್ಲಿ ಚಿತ್ರೀಕರಣ ಮುಗಿಸಿ ಬಂದ ನಂತರ ಬೆಂಗಳೂರಿನಲ್ಲಿ ಶೂಟಿಂಗ್ ಶೆಡ್ಯೂಲ್ ಗೆ ಪ್ಲಾನ್ ಮಾಡಲಾಗಿದೆ.
ಸಿನಿಮಾಗೆ ಅರ್ಜುನ್ ಜನ್ಯ ಸಂಗೀತ ನೀಡಿದ್ದು, ರವಿ ವರ್ಮಾ ಸಾಹಸ ನಿರ್ದೇಶನ ಮಾಡಿದ್ದಾರೆ. ದೀಪಕ್ ಸಮಿ ಸಿನಿಮಾ ನಿರ್ಮಾಪಕರಾಗಿದ್ದಾರೆ

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ