ತವರು ಜಿಲ್ಲೆ ರಾಮನಗರದ ಜನರ ಕುಂದುಕೊರತೆ ಆಲಿಸಿದ ಸಿಎಂ

ಬೆಂಗಳೂರು,ಆ.29- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ತಮ್ಮ ತವರು ಜಿಲ್ಲೆಯಾದ ರಾಮನಗರದ ವಿವಿಧ ಗ್ರಾಮಗಳಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿ ಅವರ ಕುಂದುಕೊರತೆಗಳನ್ನು ಆಲಿಸಿ ಅಹವಾಲು ಸ್ವೀಕರಿಸಿದರು.
ರಾಮನಗರ ಹಾಗೂ ಕನಕಪುರ ತಾಲ್ಲೂಕಿನ ತಲಾ ಎರಡು ಹೋಬಳಿಗಳಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕಾರ ಮಾಡಿದರು.
ಇಂದು ಬೆಳಗ್ಗೆ ಮೈಸೂರಿನಿಂದ ಆಗಮಿಸಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರಾಮನಗರ ತಾಲ್ಲೂಕಿನ ಕೈಲಾಂಚ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಜನಸಂಪರ್ಕ ಸಭೆ ನಡೆಸಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿದರು.

ಬಳಿಕ ಕಸಬಾ ಹೋಬಳಿಯ ಸುಗ್ಗನಹಳ್ಳಿ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಇದೇ ರೀತಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು.
ನಂತರ ಕನಕಪುರ ತಾಲ್ಲೂಕಿನ ಹೇರೋಹಳ್ಳಿ ಹಾಗೂ ಮರುಳವಾಡಿ ಗ್ರಾಮಗಳಿಗೆ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು.
ಮುಖ್ಯಮಂತ್ರಿ ಭೇಟಿ ಹಿನ್ನೆಲೆಯಲ್ಲಿ ನಾಲ್ಕು ಗ್ರಾಮಗಳಲ್ಲೂ ಸೂಕ್ತ ಬಿಗಿ ಪೆÇಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಅಲ್ಲದೆ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಲು ಸೂಕ್ತ ವ್ಯವಸ್ಥೆಯನ್ನು ಜಿಲ್ಲಾಡಳಿತ ಕಲ್ಪಿಸಿತ್ತು.
ಈ ಸಂದರ್ಭದಲ್ಲಿ ರಾಮನಗರ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಸೇರಿದಂತೆ ಜಿಲ್ಲೆಯ ಎಲ್ಲಾ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ