ಕಲಬುರಗಿ, ಬೆಳಗಾವಿಯಲ್ಲೂ ಲಾಜಿಸ್ಟಿಕ್ ಪಾರ್ಕ್ ಸ್ಥಾಪಿಸಲು ಮನವಿ

Varta Mitra News

ಬೆಂಗಳೂರು, ಆ.29-ಕೈಗಾರಿಕಾ ವಲಯಗಳಲ್ಲಿ ಆರ್ಥಿಕಾಭಿವೃದ್ಧಿ ಮತ್ತು ಬೆಳವಣಿಗೆಯನ್ನು ಪೆÇ್ರೀ ಆದ್ಯತೆ ಮೇರೆಗೆ ಲಾಜಿಸ್ಟಿಕ್ ಪಾರ್ಕ್ ಸ್ಥಾಪಿಸಲು ಮುಂದಾಗಿರುವ ಸರ್ಕಾರಕ್ಕೆ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ (ಕಾಸಿಯಾ) ಧನ್ಯವಾದ ಸಲ್ಲಿಸಿದ್ದು, ಕಲಬುರಗಿ, ಬೆಳಗಾವಿಯಲ್ಲೂ ಲಾಜಿಸ್ಟಿಕ್ ಪಾರ್ಕ್ ಸ್ಥಾಪಿಸಬೇಕೆಂದು ಮನವಿ ಮಾಡಿದೆ.

ರಾಜ್ಯದ ಪ್ರಮುಖ ಕೈಗಾರಿಕಾ ಪ್ರದೇಶಗಳಲ್ಲಿ ಲಾಜಿಸ್ಟಿಕ್ ಪಾರ್ಕ್‍ಗಳನ್ನು ಸ್ಥಾಪಿಸುವುದರಿಂದ ಅಲ್ಲಿನ ಕೈಗಾರಿಕಾ ಬೆಳವಣಿಗೆಗೆ ಹಾಗೂ ಶೀಘ್ರ ಕಾರ್ಯಚಟುವಟಿಕೆಗಳಿಗೆ ಒತ್ತು ನೀಡಿದಂತಾಗುತ್ತದೆ. ಇದರಿಂದ ಕೈಗಾರಿಕೆಗಳಲ್ಲಿ ಉತ್ಪಾದನೆ ಅಧಿಕವಾಗಿ ನೆರೆಯ ಜಿಲ್ಲೆಗಳೊಂದಿಗೆ ಸಂಪರ್ಕ ಹೊಂದಲು ಸಾಧ್ಯವಾಗಿ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದು ಕಾಸಿಯಾ ಅಧ್ಯಕ್ಷ ಬಸವರಾಜ್ ಎಸ್.ಜವಳಿ ತಿಳಿಸಿದ್ದಾರೆ.

ಮುಂಬೈ-ಬೆಂಗಳೂರು ಕೈಗಾರಿಕಾ ಕಾರಿಡಾರ್‍ನಲ್ಲಿರುವ ರಾಷ್ಟ್ರೀಯ ಕೈಗಾರಿಕಾ ಉತ್ಪಾದನಾ ವಲಯಕ್ಕೆ ಹತ್ತಿರವಾಗಿರುವ ದಾಬಸ್‍ಪೇಟೆಯಲ್ಲಿ ಮಲ್ಟಿ ಮಾಡೆಲ್ ಲಾಜಿಸ್ಟಿಕ್ ಪಾರ್ಕ್ ಜೊತೆಗೆ ವಿವಿಧ ಜಿಲ್ಲಾ ಕೈಗಾರಿಕಾ ಪ್ರದೇಶಗಳಲ್ಲಿ ಹೆಚ್ಚಿನ ಲಾಜಿಸ್ಟಿಕ್ ಪಾರ್ಕ್‍ಗಳನ್ನು ಸ್ಥಾಪಿಸಲು ಸರ್ಕಾರ ಆಸಕ್ತಿ ಹೊಂದಿರುವುದು ಪ್ರಶಂಸನೀಯ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲಾಜಿಸ್ಟಿಕ್ ಪಾರ್ಕ್‍ಗಳನ್ನು ಸ್ಥಾಪಿಸುವಾಗ ಬಂದರು, ವಿಮಾನ ನಿಲ್ದಾಣ, ರಸ್ತೆ ಸಂಪರ್ಕ, ಸಂಗ್ರಹಣೆ ಮತ್ತು ಶೀತಲ ಶೇಖರಣೆಯ ಸೌಲಭ್ಯಗಳನ್ನು ಒಳಗೊಂಡಂತೆ ಅಗತ್ಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಬೇಕೆಂದು ಅವರು ಮನವಿ ಮಾಡಿದ್ದಾರೆ.
ಬೆಳಗಾವಿ ರಫ್ತು ಉದ್ಯಮಕ್ಕೆ ಹೆಚ್ಚು ಒತ್ತು ನೀಡುವ ಪ್ರದೇಶವಾಗಿ ಕೈಗಾರಿಕಾ ಚಟುವಟಿಕೆಗಳ ಪ್ರಮುಖ ಕೇಂದ್ರವಾಗಿ ಪರಿಗಣಿಸಲ್ಪಟ್ಟಿದೆ. ಈ ನಿಟ್ಟಿನಲ್ಲಿ ತೋಟಗಾರಿಕೆ ಉತ್ಪನ್ನಗಳು, ತರಕಾರಿ ಮತ್ತು ಪುಷ್ಪೋದ್ಯಮ ಉತ್ಪನ್ನಗಳ ಬೆಳವಣಿಗೆಗೆ ಪೂರಕವಾಗುವಂತೆ ಫುಡ್‍ಪಾರ್ಕ್ ವಲಯವನ್ನಾಗಿ ಅಭಿವೃದ್ಧಿ ಪಡಿಸಬಹುದಾಗಿದೆ ಎಂದು ಅವರು ಸಲಹೆ ನೀಡಿದ್ದಾರೆ.
ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ರೈಲು ಮೂಲಸೌಲಭ್ಯಗಳನ್ನು ಅಧಿಕಗೊಳಿಸಬೇಕು. ರಾಷ್ಟ್ರೀಯ ಹೆದ್ದಾರಿಗೆ ಸಮಾನಾಂತರವಾಗಿ ಹೊಸ ಮಾರ್ಗಗಳನ್ನು ಹಾಕಬೇಕು, ಹುಬ್ಬಳ್ಳಿ-ಬೆಳಗಾವಿ ನಡುವಿನ ರೈಲು ಸಂಪರ್ಕದ ಅಭಿವೃದ್ಧಿಗೆ ಒತ್ತು ನೀಡಬೇಕು, ಕಾರವಾರದಿಂದ ಧಾರವಾಡಕ್ಕೆ ಕೊಲ್ಹಾಪುರ ಮಾರ್ಗವಾಗಿ ಹಾಗೂ ಬೆಳಗಾವಿ ಹೊಸ ರೈಲು ಮಾರ್ಗವನ್ನು ಹಾಕಬಹುದಾಗಿದೆ ಎಂದು ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ